ಜಿಲ್ಲಾ ಸುದ್ದಿ

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕೀಚಕರು

8 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಕೀಚಕರು, ಬಳಿಕ ಬಾಲಕಿಯ ತಲೆ ಮೇಲೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕೆರಗೋಡು ಬಳಿಯ ಶಿವಾರ ಗ್ರಾಮದಲ್ಲಿ ಭಾನುವಾರ ನಡೆದಿದೆ...

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಕೀಚಕರು
ಸಾಂದರ್ಭಿಕ ಚಿತ್ರ
Published On :

ಮಂಡ್ಯ: 8 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಕೀಚಕರು, ಬಳಿಕ ಬಾಲಕಿಯ ತಲೆ ಮೇಲೆ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಕೆರಗೋಡು ಬಳಿಯ ಶಿವಾರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಮೃತ ಬಾಲಕಿ ಕುರಿದೊಡ್ಡಿ ಗ್ರಾಮದ ನಿವಾಸಿಯಾಗಿದ್ದು, ಶಿವಾರ ಗ್ರಾಮ ತನ್ನ ಅಜ್ಜಿಯ ಮನೆಯಾದ್ದರಿಂದ ಬಾಲಕಿ ಅಜ್ಜಿಯ ಮನೆಯಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ.

ಬಾಲಕಿ ಹೊರಾಂಗಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಬಾಲಕಿಯ ಬಳಿ ಬಂದ ಕೀಚಕರು ಬಾಲಕಿಗೆ ತಿಂಡಿ ಕೊಡಿಸುವ ಆಸೆ ತೋರಿಸಿ ಕರೆದೊಯ್ದಿದ್ದಾರೆ. ನಂತರ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆಕೆಯ ಮೇಲೆ ಅತ್ಯಾಚಾರವೆಸಗಿ ನಂತರ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.