ಜಿಲ್ಲಾ ಸುದ್ದಿ

ಪಿಯು ಗೊಂದಲ ಅಧಿಕಾರಿಗಳ ಜತೆ ಕಿಮ್ಮನೆ ದಿಢೀರ್ ಸಭೆ

ದ್ವಿತೀಯ ಪಿಯುಸಿ ಫಲಿತಾಂಶದ ಲೋಪ ದೋಷಗಳ ಬಗ್ಗೆ ಭಾರೀ ವಿವಾದಗಳೆದ್ದ ಹಿನ್ನೆಲೆಯಲ್ಲಿ ಎಚ್ಚೆತ್ತು ಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ...

ಪಿಯು ಗೊಂದಲ ಅಧಿಕಾರಿಗಳ ಜತೆ ಕಿಮ್ಮನೆ ದಿಢೀರ್ ಸಭೆ
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ
Published On :

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದ ಲೋಪ ದೋಷಗಳ ಬಗ್ಗೆ ಭಾರೀ ವಿವಾದಗಳೆದ್ದ ಹಿನ್ನೆಲೆಯಲ್ಲಿ ಎಚ್ಚೆತ್ತು ಕೊಂಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಭಾನುವಾರ ಸಂಜೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ದಿಢೀರ್ ಭೇಟಿ ನೀಡಿದ್ದಾರೆ.

ರಜೆ ದಿನವಾದರೂ ಪಿಯು ಮಂಡಳಿ ಅಧಿಕಾರಿಗಳು ಕಾರ್ಯನಿರ್ವಹಿಸಿದರು. ಸುಮಾರು ಎರಡು ಗಂಟೆ ಕಾಲ ಇಲಾಖೆ ನಿರ್ದೇಶಕಿ ಸುಷಮಾ ಗೋಡಬೋಲೆ ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮರುಮೌಲ್ಯಮಾಪನ ಹಾಗೂ ಮರುಪ್ರತಿ ತೆಗೆಯುವ ಕುರಿತುಚರ್ಚಿಸಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಉತ್ತರ ಪತ್ರಿಕೆಗಳ ಪ್ರತಿಗೆ ಮನವಿ ಮಾಡಿದ್ದು, 20,600 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.

ಇವುಗಳಲ್ಲಿ ಹುಡುಕಿ ತೆಗೆದಿರುವ ಉತ್ತರ ಪತ್ರಿಕೆಗಳ ಸಂಖ್ಯೆಯೆಷ್ಟು? ದೊರೆತಿರುವ ಉತ್ತರ ಪತ್ರಿಕೆಗಳಲ್ಲಿ ಎಷ್ಟು ಜೆರಾಕ್ಸ್ ಪ್ರತಿಗಳು ವಿದ್ಯಾರ್ಥಿಗಳಿಗೆ ನೀಡಲು ಸಿದಟಛಿವಾಗಿವೆ? ಎಷ್ಟು ವಿದ್ಯಾರ್ಥಿಗಳಿಗೆ ಪ್ರತಿ ಕಳುಹಿಸಲಾಗಿದೆ ಎಂಬ ವಿಷಯ ಕುರಿತು ಸಚಿವರು ಮಾಹಿತಿ ಪಡೆದಿದ್ದಾರೆ. ಎರಡು ದಿನಗಳಲ್ಲೇ ಪ್ರತಿಗಳನ್ನು ಕಳುಹಿಸುವ ಪ್ರಕ್ರಿಯೇ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಕಿಮ್ಮನೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.