ಚೆನ್ನಗಿರಿ ಬಳಿ ಬಸ್ ಪಲ್ಟಿ; ಮೂವರ ಸಾವು, ಹಲವರಿಗೆ ಗಾಯ
ಸಂತೆಬೆನ್ನೂರು ಮಾರ್ಗವಾಗಿ ದಾವಣಗೆರೆಗೆ ಸಾಗುತ್ತಿದ್ದ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ 3 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ...

ಚೆನ್ನಗಿರಿ: ಸಂತೆಬೆನ್ನೂರು ಮಾರ್ಗವಾಗಿ ದಾವಣಗೆರೆಗೆ ಸಾಗುತ್ತಿದ್ದ ಖಾಸಗಿ ಬಸ್ ವೊಂದು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ 3 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ದಾವಣೆಗೆರೆ ಹೋಗುತ್ತಿದ್ದ ಖಾಸಗಿ ಬಸ್ ನಲ್ಲಿ ಸುಮಾರು 25 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಸ್ ಚೆನ್ನಗಿರಿ ಬಸ್ ನಿಲ್ದಾಣದ ಸಮೀಪ ಚಲಿಸುತ್ತಿದ್ದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಪಲ್ಟಿ ಹೊಡೆದಿದೆ. ಇದರ ಪರಿಣಾಮ ಮುಂಬಾಗದ ಸೀಟ್ ನಲ್ಲಿ ಕುಳಿತಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಅಪಘಾತಕ್ಕೀಡಾದ ಬಸ್ 'ಗೀತಾಂಜನೇಯ' ಎಂದು ತಿಳಿದುಬಂದಿದ್ದು, ಘಟನೆಗೆ ಅತಿಯಾದ ವೇಗವೇ ಕಾರಣ ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ....
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


