ಪಿಯುಸಿ ಫಲಿತಾಂಶ ಗೊಂದಲ: ಸುಷ್ಮಾ ಗೋಡಬೊಲೆಗೆ ನೋಟಿಸ್
ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೊಲೆ...

ಬೆಂಗಳೂರು: ಪಿಯುಸಿ ಫಲಿತಾಂಶ ಪ್ರಕಟಣೆ ವೇಳೆ ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷ್ಮಾ ಗೋಡಬೊಲೆಯವರಿಗೆ ಸರ್ಕಾರ ನೋಟಿಸ್ ಜಾರಿ ಮಾಡಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಕತ್ರಿ ಅವರು ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. ಮೇ 18ರಂದು ಪಿಯುಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಸಾಕಷ್ಟು ಗೊಂದಲ ಉಂಟಾಗಿತ್ತು.
ಸರ್ಕಾರಿ ವೆಬ್‍ಸೈಟ್‍ಗಳಲ್ಲಿ ಒಂದು ರೀತಿಯ ಫಲಿತಾಂಶ ಪ್ರಕಟಗೊಂಡರೆ, ಖಾಸಗಿ ವೆಬ್‍ಸೈಟ್‍ನಲ್ಲಿ ಮತ್ತೊಂದು ರೀತಿಯ ಫಲಿತಾಂಶ ಬಂದಿತ್ತು. ಇದರಿಂದ ಸಾಕಷ್ಟು ಗೊಂದಲ ಉಂಟಾಯಿತಲ್ಲದೇ, ಗೊಂದಲಕ್ಕೆ ಬಿದ್ದ ಪೋಷಕರು ವಿದ್ಯಾರ್ಥಿಗಳನ್ನು ನಿಭಾಯಿಸುವಲ್ಲಿ ಇಲಾಖೆ ವಿಫಲವಾಗಿ, ಪ್ರತಿಭಟನೆ ಬಿಸಿ ಎದುರಿಸಿತ್ತು. ಈ ನಡುವೆ ಸರ್ಕಾರ ಇಲಾಖೆಯ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


