ಬೆಂಗಳೂರು ನಗರ ಪ್ರದಕ್ಷಿಣೆಗಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರುನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶನಿವಾರ ನಗರ ಪ್ರದಕ್ಷಿಣೆ ಮಾಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ...

ಬೆಂಗಳೂರು: ಬೆಂಗಳೂರುನಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶನಿವಾರ ನಗರ ಪ್ರದಕ್ಷಿಣೆ ಮಾಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಿಗ್ಗೆ 10.30ರ ಸುಮಾರಿಗೆ ಗೃಹ ಕಚೇರಿ ಕೃಷ್ಣಾದಿಂದ ಹೊರಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರೋಷನ್ ಬೇಕ್, ಶಾಸಕರಾದ ಮುನಿರತ್ನ, ಪ್ರಿಯಾಕೃಷ್ಣ ಸೇರಿತಂತೆ ಮತ್ತಿತರೆ ಸಚಿವರು ಸಾಥ್ ನೀಡಿದ್ದಾರೆ.
ನಗರ ಪ್ರದಕ್ಷಿಣೆಗೆ ಮೂರು ಬಿಎಂಟಿಸಿ ವಜ್ರ ಬಸ್ಸುಗಳನ್ನು ಬಳಸಿಕೊಂಡಿದ್ದು, ಬೆಂಗಳೂರು ಉತ್ತರ ಭಾಗದಲ್ಲಿರುವ ಯಲಹಂಕ ಮತ್ತು ಧಣಿಸಂದ್ರದ ನಡುವಿನ ಯೋಗೇಶ್ ನಗರಕ್ಕೆ ಭೇಟಿ ನೀಡಿ ಚರಂಡಿ ವ್ಯವಸ್ಥೆ ಹಾಗೂ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ರಾಜಾ ಕಾಲುವೆಯ ಹೂಳೆತ್ತಲು ಅಧಿಕಾರಿಗಳಿ ಸೂಚನೆ ನೀಡಿದ್ದಾರೆ. ನಂತರ ಹೆಬ್ಬಾಳದೆಡೆಗೆ ಪ್ರಯಾಣ ಬೆಳೆಸಿದ ಸಿಎಂ ಅವರು, ಅಲ್ಲಿನ ಟ್ರಾಫಿಕ್ ಸಮಸ್ಯೆಗಳನ್ನು ಗಮನಸಿದ್ದಾರೆ. ನಂತರ ಹೆಬ್ಬಾಳದ ಕೆಂಪಾಪುರ ಜಂಕ್ಷನ್ ಬಳಿ ಸ್ಕೈವಾಕ್ ನಿರ್ಮಾಣ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನಗರ ಪ್ರದಕ್ಷಿಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಈಗಾಗಲೇ ಸಾಕಷ್ಟು ಸಮಸ್ಯೆಗಳಿದ್ದು, ಅಭಿವೃದ್ಧಿ ಕಾರ್ಯಗಳನ್ನು ಸುಧಾರಿಸುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ, ಬಿಡಿಎ, ಜಲಮಂಡಳಿ ಸೇರಿದಂರೆ ನಗರದ ಇತರೆ ಸಂಸ್ಥೆಗಳಲ್ಲಿ ಸಮನ್ವಯತೆ ಸಾಧಿಸುವ ಅವಶ್ಯಕತೆಯಿದ್ದು, ಈ ಕುರಿತಂತೆ ವಿಶೇಷ ಸಮಿತಿಯೊಂದನ್ನು ರಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಲಾಗುವುದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


