ಜೂನ್ 10 ರಂದು ಕರವೆ ಯಿಂದ ಸಾಮಾಜಿಕ ಕಾರ್ಯಕ್ರಮ
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಜನ್ಮದಿನದ ಅಂಗವಾಗಿ ಜೂನ್ 10ರಂದು ನಗರದ ಅರಮನೆ ಮೈದಾನದಲ್ಲಿ...

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಜನ್ಮದಿನದ ಅಂಗವಾಗಿ ಜೂನ್ 10ರಂದು ನಗರದ ಅರಮನೆ ಮೈದಾನದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ವೇದಿಕೆಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ರಾಷ್ಟ್ರಕವಿ ಕುವೆಂಪು ಮಂತ್ರ ಮಾಂಗಲ್ಯ ಸಾಮೂಹಿಕ ವಿವಾಹ, ಎಸ್ ಎಸ್ ಎಲ್ ಸಿ, ಪದವಿ, ಪಿಯುಸಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 25 ಮಂದಿ ಕ್ಯಾನ್ಸರ್ ಪೀಡಿತರಿಗೆ ತಲಾ 25 ಸಾವಿರ ಧನ ಸಹಾಯ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಗಾಯತ್ರಿ ವಿಹಾರದಲ್ಲಿ ಈ ಎಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ನಟ ನಟಿಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನಟಿ ಅಶ್ವಿನಿಗೌಡ, ಆಂಜನಪ್ಪ, ಪಟೇಲ್ ಕೆ ಸತೇಶ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


