ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಟೆಕ್ಕಿ ಸಾವು
ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ...

ಬೆಂಗಳೂರು: ನಗರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
ಶವಂತಪುರ ಮೇಲ್ಸೇತುವೆ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ಸಾಫ್ಟ್ ವೇರ್ ಎಂಜಿನಿಯರ್ ಮೃತಪಟ್ಟ ಘಟನೆ ಭಾನುವಾರ ನಸುಕಿನಲ್ಲಿ ಸಂಭವಿಸಿದೆ. ರಾಜಾಜಿನಗರ ನಿವಾಸಿ ಎಲ್.ವಿನಯ್ ಶಂಕರ್ (26) ಮೃತರು. ನಗರದ ಎಚ್‍ಪಿ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಂಕರ್, ಶನಿವಾರ ರಾತ್ರಿ ಭೂಪಸಂದ್ರದಲ್ಲಿರುವ ಸ್ನೇಹಿತನ ಮನೆಯಲ್ಲಿ ಪಾರ್ಟಿ ಮಾಡಿ ಅಲ್ಲೇ ಉಳಿದುಕೊಂಡಿದ್ದರು.
ಬೆಳಗ್ಗೆ 6 ಗಂಟೆ ಸುಮಾರಿಗೆ ತಮ್ಮ ಬೈಕ್‍ನಲ್ಲಿ ಮನೆಗೆ ವಾಪಸಾಗುತ್ತಿದ್ದರು. ಯಶವಂತಪುರ ಮೇಲ್ಸೇತುವೆ ತಿರುವಿನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟಾಗಿದ್ದ ಶಂಕರ್ ನನ್ನು ಇತರೆ ವಾಹನ ಸವಾರರು ಮಲ್ಲೇಶ್ವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಶಂಕರ್ ತಂದೆ ಕೈಮಗ್ಗ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಶಂಕರ್, ಮದ್ಯಪಾನ ಮಾಡಿದ್ದರೋ ಇಲ್ಲವೋ ಎನ್ನುವ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ತಿಳಿದು ಬರಲಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಯಶವಂತಪುರ ಸಂಚಾರ ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


