ಮುತ್ತತ್ತಿಯಲ್ಲಿ ಕಾವೇರಿ ನದಿ ಸುಳಿಗೆ ಸಿಕ್ಕಿ ಕೊಚ್ಚಿ ಹೋದ 2 ಬಾಲಕರು
ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುವಾಗಿ ಸುಳಿಗೆ ಸಿಲುಕಿ ಇಬ್ಬರು ಬಾಲಕರು ಕೊಚ್ಚಿ ಹೋಗಿರುವ ಘಟನೆ...

Published On :
ಮಳವಳ್ಳಿ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುವಾಗ ಸುಳಿಗೆ ಸಿಲುಕಿ ಇಬ್ಬರು ಬಾಲಕರು ಕೊಚ್ಚಿ ಹೋಗಿರುವ ಘಟನೆ ವರದಿಯಾಗಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ನಿವಾಸಿಗಳಾದ ಹರ್ಷವರ್ಧನ್ (15), ಮತ್ತು ಹರಿಕೃಷ್ಣ (20) ಪ್ರವಾಸಕ್ಕೆಂದು ಮಳವಳ್ಳಿಯಲ್ಲಿರುವ ಮುತ್ತತ್ತಿಗೆ ತೆರಳಿದ್ದಾರೆ. ಅಲ್ಲಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ಸುಳಿಗೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.
ನಿನ್ನೆ ಬೆಳಗ್ಗೆ ಕುಟುಂಬ ಸಮೇತರಾಗಿ ಮುತ್ತತ್ತಿಗೆ ತೆರಳಿದ್ದರು. ದೇವಾಲಯದಲ್ಲಿ ಪೂಜೆ ಮುಗಿಸಿ ಊಟ ಮಾಡಿದ ನಂತರ ಕೆಲವರು ನೀರಿಗೆ ಇಳಿದಿದ್ದರು, ಆ ಸಮಯದಲ್ಲಿ ಇಬ್ಬರು ಬಾಲಕರು ತಾಯಿ ರೇವತಿ ಎದುರೇ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಬೆಳಗ್ಗಿನಿಂದ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


