ಬೆಮೆಲ್ ಕೃಷ್ಣಪ್ಪ ಹತ್ಯೆ ಆರೋಪಿಗೆ ಜಾಮೀನು
ಬೆಮೆಲ್ ಕೃಷ್ಣಪ್ಪ ಅವರ ಕೊಲೆ ಪ್ರಕರಣದ ಮೂರನೇ ಆರೋಪಿಯಾದ ಎಚ್.ಡಿ. ಹರೀಶ್‍ಗೆ ಹೈ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ...

ಬೆಂಗಳೂರು: ಬೆಮೆಲ್ ಕೃಷ್ಣಪ್ಪ ಅವರ ಕೊಲೆ ಪ್ರಕರಣದ ಮೂರನೇ ಆರೋಪಿಯಾದ ಎಚ್.ಡಿ. ಹರೀಶ್‍ಗೆ ಹೈ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಎಚ್.ಡಿ.ಹರೀಶ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ಏಕಸದಸ್ಯ ಪೀಠ, ರು.50 ಲಕ್ಷ ವೈಯಕ್ತಿಕ ಬಾಂಡ್ ಒದಗಿಸಬೇಕು. ಸಾಕ್ಷ್ಯಾಧಾರಗಳನ್ನು ತಿರುಚುವ ಅಥವಾ ಸಾಕ್ಷಿಗಳನ್ನು ಬೆದರಿಸಲು ಪ್ರಯತ್ನಿಸಬಾರದು. ಪ್ರಕರಣ ಇತ್ಯರ್ಥವಾಗುವವರೆಗೂ ಬೆಂ. ಗ್ರಾಮಾಂತರ ಎಸ್ಪಿ ಮುಂದೆ ಪ್ರತಿ ಬುಧವಾರ ಮತ್ತು ಭಾನುವಾರ ಬೆಳಗ್ಗೆ 9ರಿಂದ 5 ಗಂಟೆಯೊಳಗೆ ಹಾಜರಾಗಬೇಕು. ಅಲ್ಲದೆ, ಅಧೀನ ನ್ಯಾಯಾಲಯದಲ್ಲಿ ವಿಚಾರಣೆಗೆ ತಪ್ಪದೇ ಹಾಜರಿರಬೇಕು ಎಂದು ಷರತ್ತುಗಳನ್ನು ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


