ಸಿಂಹಾಸನ ವೀಕ್ಷಣೆಗೆ ನಿರ್ಬಂಧ; ವರದಿಗೆ ಸೂಚನೆ
ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿ...

Published On :
ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಅರಮನೆ ಮಂಡಳಿಯಿಂದ ವರದಿ ಕೇಳಲಾಗಿದೆ ಎಂದು ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ತಿಳಿಸಿದರು.
ಸಾರ್ವಜನಿಕರು ಹಾಗೂ ಪ್ರವಾಸಿಗರಿರು ಸಿಂಹಾಸನ ವೀಕ್ಷಣೆಗೆ ಯಾವ ಕಾರಣಕ್ಕೆ ನಿರ್ಬಂಧ ಹಾಕಲಾಗಿದೆ ಎಂಬುದಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಈ ಸಂಬಂಧ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಚರ್ಚಿಸಿ ಕಾರಣ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದಸರಾ ಜಂಬೂಸವಾರಿಯಂದು ಚಿನ್ನದ ಅಂಬಾರಿ ಕೊಡುವುದು ತಡವಾಗಿತ್ತು. ಅಂಬಾರಿಗೆ ಪ್ರತಿವರ್ಷ ರಾಜಮನೆತನದ ಹೆಸರಿನಲ್ಲಿ ವಿಮೆ ಮಾಡಿಸಲಾಗುತ್ತಿತ್ತು. ಈ ಬಾರಿ ಜಿಲ್ಲಾಧಿಕಾರಿ ಹೆಸರಿನಲ್ಲಿ ವಿಮೆ ಮಾಡಿಸಿದ್ದರಿಂದ ಅಂಬಾರಿ ಕೊಡುವುದು ತಡವಾಗಿತ್ತು.
ಈ ವೇಳೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಸಮಾಲೋಚ ನೆ ನಡೆಸಿ ಅಂಬಾರಿ ಕೊಡಲು ಒಪ್ಪಿಸಿದ್ದಾಗಿ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


