ದಾರಿ ತಪ್ಪಿ ಅಡ್ಡಾಡಿದರೆ ದಂಡ
ಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರವೇಶ ದ್ವಾರ ಸೇರಿದಂತೆ ವಾಹನ ದಟ್ಟಣೆ ತೀವ್ರವಾಗಿರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟುವ ಅಶಿಸ್ತಿನ ಪಾದಚಾರಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಮಂಗಳ ವಾರ 30 ಪ್ರಕರಣಗಳನ್ನು ದಾಖಲಿಸಿದ್ದಾರೆ...

ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣ ಪ್ರವೇಶ ದ್ವಾರ ಸೇರಿದಂತೆ ವಾಹನ ದಟ್ಟಣೆ ತೀವ್ರವಾಗಿರುವ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟುವ ಅಶಿಸ್ತಿನ ಪಾದಚಾರಿಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು ಮಂಗಳ ವಾರ 30 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಉಪ್ಪಾರಪೇಟೆ ಸಂಚಾರ ಠಾಣೆ ವ್ಯಾಪ್ತಿಯಲ್ಲಿ 18, ಚಿಕ್ಕಪೇಟೆ ವ್ಯಾಪ್ತಿಯಲ್ಲಿ 4, ಬನಶಂಕರಿ ವ್ಯಾಪ್ತಿಯಲ್ಲಿ 8 ಮಂದಿಯ ವಿರುದಟಛಿ ಪ್ರಕರಣ ದಾಖಲಿಸಿದರು. ಸಂಚಾರ ನಿಯಮ ಉಲ್ಲಂಘಿಸಿದವರು ಸಂಚಾರ ನ್ಯಾಯಾಲಯದಲ್ಲಿ ರು.100 ದಂಡ ಪಾವತಿಸಿದರು. ಕೆಂಪೇಗೌಡ ಬಸ್ ನಿಲ್ದಾಣ ಪ್ರವೇಶ ದ್ವಾರ, ಚಿಕ್ಕಪೇಟೆ ಹಾಗೂ ಬನಶಂಕರಿ ಬಸ್ ನಿಲ್ದಾಣದ ಬಳಿ ಬಸ್ಗಳು ಹಾಗೂ ಇತರೆ ವಾಹನಗಳ ಓಡಾಟ ಹೆಚ್ಚಿರುವ ಕಡೆ ಸ್ಕೈವಾಕರ್ ಹಾಗೂ ಅಂಡರ್ಪಾಸ್ ವ್ಯವಸ್ಥೆ ಇದೆ. ಆದರೂ, ಪಾದಚಾರಿಗಳು ರಸ್ತೆ ಮೇಲೆ ಓಡಾಡುತ್ತಿದ್ದ ಕಾರಣ ಪ್ರಕರಣ ದಾಖಲಿಸಲಾಯಿತು.
ಇತ್ತೀಚೆಗೆ ಕೆಂಪೇಗೌಡ ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಮೌಂಟ್ ಕಾರ್ಮೆಲ್ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಇಂಥ ಘಟನೆ ಮರುಕಳಿಸುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರು ಪಾದಚಾರಿ ಮಾರ್ಗದಲ್ಲೇ ಸಂಚರಿಸುವಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅ„ಕಾರಿ ಹೇಳಿದರು. ಕಳೆದ ಮೂರು ತಿಂಗಳಲ್ಲಿ ಅಡ್ಡಾದಿಡ್ಡಿಯಾಗಿ ರಸ್ತೆ ದಾಟಿದ ಒಟ್ಟು 1,608 ಪಾದಚಾರಿಗಳ ವಿರುದ್ಧ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


