ಜಿಲ್ಲಾ ಸುದ್ದಿ

ಯಲ್ಲಾಲಿಂಗ ಕೊಲೆ ಪ್ರಕರಣ: 3 ಆರೋಪಿಗಳ ಜಾಮೀನು ಅರ್ಜಿ ವಜಾ

ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್...

ಯಲ್ಲಾಲಿಂಗ ಕೊಲೆ ಪ್ರಕರಣ: 3 ಆರೋಪಿಗಳ ಜಾಮೀನು ಅರ್ಜಿ ವಜಾ
ಹನುಮೇಶ್ ನಾಯಕ್
Published On :

ಕೊಪ್ಪಳ: ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್ ಸೇರಿದಂತೆ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಬುಧವಾರ ಕೋರ್ಟ್ ವಜಾಗೊಳಿಸಿದೆ.

ಆರೋಪಿಗಳಾದ ಹನುಮೇಶ್ ನಾಯಕ್, ಬಾಳನಗೌಡ ಹಾಗೂ ಪರಶುರಾಮ್ ಜಾಮೀನು ಕೋರಿ ಕೊಪ್ಪಳ ಜಿಲ್ಲಾ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ ಜಡ್ಜ್ ಕೆ.ನಾಗರತ್ನ ಅವರು, ಆರೋಪಿಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ.

ಗ್ರಾಮದ ಸಮಸ್ಯೆಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡಿದ್ದ ಗಂಗಾವತಿ ತಾಲೂಕಿನ ಕನಕಾಪುರ ಗ್ರಾಮದ ನಿವಾಸಿ ಯಲ್ಲಾಲಿಂಗನನ್ನು ಕಳೆದ ಜನವರಿಯಲ್ಲಿ ಅಮಾನುಷವಾಗಿ ಕೊಲೆ ಮಾಡಲಾಗಿತ್ತು. ಯಲ್ಲಾಲಿಂಗ ಕೊಲೆ ನಂತರ ಜಿಲ್ಲೆಯಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದವು. ಬಳಿಕ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.