ಬೆಂಗಳೂರಿನಲ್ಲಿ ವಿಷ ಕುಡಿದು ದಂಪತಿ ಆತ್ಮಹತ್ಯೆ
ಅಡುಗೆ ಕೋಣೆಯಲ್ಲಿ ದಂಪತಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಂಗೇರಿ ಉಪನಗರದಲ್ಲಿ ಜರುಗಿದೆ. ರಮೇಶ್ (45) ಮತ್ತು ರಶ್ಮಿ (35) ಆತ್ಮಹತ್ಯೆಗೆ ಶರಣಾದ ದಂಪತಿ. ...

ಬೆಂಗಳೂರು: ಅಡುಗೆ ಕೋಣೆಯಲ್ಲಿ ದಂಪತಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆಂಗೇರಿ ಉಪನಗರದಲ್ಲಿ ಜರುಗಿದೆ. ರಮೇಶ್ (45) ಮತ್ತು ರಶ್ಮಿ (35) ಆತ್ಮಹತ್ಯೆಗೆ ಶರಣಾದ ದಂಪತಿ.
ನೆಲಮಂಗಲ ಮೂಲದ ಈ ದಂಪತಿ ಎಸ್ ಪ್ರಿಂಟರ್ಸ್ ಎಂಬ ಪ್ರಿಂಟಿಂಗ್ ಏಜೆನ್ಸಿ ನಡೆಸುತ್ತಿದ್ದರು. ಮಂಗಳವಾರ ರಾತ್ರಿ 8.30 ರ ಸುಮಾರಿಗೆ ಹೃತಿಕ್ ಮನೆಯಲ್ಲಿ ಟಿವಿ ನೋಡುತ್ತಿದ್ದ. ಅಡುಗೆ ಮನೆಯಿಂದ ನರಳಾಟ ಶಬ್ದ ಕೇಳಿಸಿದೆ. ತಕ್ಷಣ ಹೋಗಿ ನೋಡಿದಾಗ ಪೋಷಕರು ಬಾಯಲ್ಲಿ ನೊರೆ ಕಾರಿಕೊಂಡು ಒದ್ದಾಡುತ್ತಿರುವುದು ಕಂಡು ಬಂದಿದೆ.
ಗಾಬರಿಗೊಂಡ ಹೃತಿಕ್ ತಮ್ಮ ಸಂಬಂಧಿಕರಿಗೆ ಕರೆ ಮಾಡಿ ವಿಶಯ ತಿಳಿಸಿದ್ದಾನೆ. ಕೆಲ ಹೊತ್ತಿಗೆ ಮನೆಗೆ ಧಾವಿಸಿದ ಸಂಬಂಧಿಕರು ಒದ್ದಾಡುತ್ತಿದ್ದ ದಂಪತಿಯನ್ನು ಚಿಕಿತ್ಸೆ ಕೊಡಿಸಲು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಈ ವೇಳೆ ಸ್ಥಿತಿ ಗಂಭೀರವಾಗಿದ್ದರಿಂದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಿಜಿಎಸ್ ಆಸ್ಪತ್ರೆಗೆ ಸಾಗಿಸಲು ಮುಂದಾದಾಗ ಮಾರ್ಗ ಮಧ್ಯದಲ್ಲೇ ದಂಪತಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವ್ಯವಹಾರದಲ್ಲಿ ನಷ್ಟ ಹಾಗೂ ಸಾಲಬಾಧೆ ದಂಪತಿ ಆತ್ಮಹತ್ಯೆಗೆ ಕಾರಣ ಇರಬಹುದೆಂದು ಸಂಬಂದಿಕರು ತಿಳಿಸಿದ್ದಾರೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


