ರಾಘವೇಶ್ವರ ಶ್ರೀಗೆ ಜಾಮೀನು ರದ್ದತಿ ಅರ್ಜಿ: ನಾಳೆ ತೀರ್ಪು
ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಸಂಬಂಧ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗೆ...

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಸಂಬಂಧ ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮೀಜಿಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಸಿಐಡಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಸೆಷನ್ಸ್ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ. ಬುಧವಾರ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ನ.6ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿದರು.
ಹಿನ್ನೆಲೆ: ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಘವೇಶ್ವರ ಸ್ವಾಮೀಜಿ ಅವರ ಜಾಮೀನು ರದ್ದು ಮಾಡುವಂತೆ ಕೋರಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಸ್ವಾಮೀಜಿ ಪರ ವಕೀಲರು ಇದಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು. ಮಂಗಳವಾರ ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿತ್ತು. ಬುಧವಾರ ಅಂತಿಮ ವಿಚಾರಣೆ ನಡೆಸಿದ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


