ಜಿಲ್ಲಾ ಸುದ್ದಿ

ನಕಲಿ ಸಿದ್ಧ ಉಡುಪು ಮಾರುತ್ತಿದ್ದವ ಬಂಧನ

ಪ್ರತಿಷ್ಠಿತ ಕಂಪನಿಗಳ ನಕಲಿ ಸಿದ್ಧ ಉಡುಪುಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ನೇಪಾಳದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ...

ನಕಲಿ ಸಿದ್ಧ ಉಡುಪು ಮಾರುತ್ತಿದ್ದವ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ನಕಲಿ ಸಿದ್ಧ ಉಡುಪುಗಳನ್ನು ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ನೇಪಾಳದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು  ಬಂಧಿಸಿ ರೂ, 1.8 ಕೋಟಿ ಮೌಲ್ಯದ ನಕಲಿ ಬಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಶಾಂತಿನಗರಗ ಶ್ರೀ ಜಗದ್ಗುರು ಉದಾಶಿನ್ ರಸ್ತೆಯಲ್ಲಿರುವ ಪಿ.ಎಸ್.ಶೆಲ್ಟರ್ ಅಪಾರ್ಟ್ ಮೆಂಟ್ ನಿವಾಸಿ ಲಕ್ಷ್ಮಣ್ (26) ಬಂಧಿತ. ಜೀನ್ಸ್ ಪ್ಯಾಂಟ್, ಶರ್ಟ್, ಟೀ ಶರ್ಟ್ ಗಳಿಗೆ ಪ್ರತಿಷ್ಠಿತ ಕಂಪನಿಗಳ ಸ್ಟಿಕ್ಕರ್ ಗಳನ್ನು ಅಂಟಿಸಿ ಅಸಲಿ ಉತ್ಪನ್ನಗಳೆನ್ನುವಂತೆ ಬಿಂಬಿಸಿ ಮಾರುತ್ತಿದ್ದರು.

ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ಆರೋಪಿಯ ಗೋದಾಮಿನ ಮೇಲೆ ದಾಳಿ ನಡೆಸಿ, ರೂ. 1.8 ಕೋಟಿ ಮೌಲ್ಯದ ವಿವಿಧ ಕಂಪನಿಗಳ 6,177 ಬಟ್ಟೆಗಳನ್ನು ಜಪ್ತಿ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಮಾಲೀಕ ಸಂಜಯ್ ಬತೀಜಾ ಹಾಗೂ ಬಂಧಿತ ಲಕ್ಷ್ಮಣ್ ಕಳೆದ ನಾಲ್ಕು ವರ್ಷಗಳಿಂದ ಈ ದಂಧೆಯಲ್ಲಿ ತೊಡಗಿದ್ದರು. ನಕಲಿ ಸಿದ್ಧ ಉಡುಪುಗಳನ್ನು ಲೂದಿಯಾನದಿಂದ ತರಿಸಿಕೊಂಡು ಅಸಲಿ ಕಂಪನಿಗಳ ದರಕ್ಕೆ ಮಾರಾಟ ಮಾಡುತ್ತಿದ್ದರು ಎಂದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.