ಜಿಲ್ಲಾ ಸುದ್ದಿ

ರಾಜ್ಯದಲ್ಲಿ ಎಲ್ಲೇ ಅತ್ಯಾಚಾರವಾದರೂ ಸಹಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್

ರಾಜ್ಯದಲ್ಲಿ ಎಲ್ಲೇ ಅತ್ಯಾಚಾರವಾದರೂ ನಾವು ಸಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್...

ರಾಜ್ಯದಲ್ಲಿ ಎಲ್ಲೇ ಅತ್ಯಾಚಾರವಾದರೂ ಸಹಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್
ಡಿಜಿ-ಐಜಿಪಿ ಕಚೇರಿಯಲ್ಲಿ ಗೃಹ ಮಂತ್ರಿ ಜಿ.ಪರಮೇಶ್ವರ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು
Published On :
ಬೆಂಗಳೂರು: ರಾಜ್ಯದಲ್ಲಿ ಎಲ್ಲೇ ಅತ್ಯಾಚಾರವಾದರೂ ನಾವು ಸಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. 
ನಗರದ ನೃಪತುಂಗ ರಸ್ತೆಯಲ್ಲಿರುವ ಡಿಜಿ-ಐಜಿಪಿ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ನಂತರ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಎಲ್ಲೇ ಅತ್ಯಾಚಾರವಾದರೂ ನಾವು ಸಹಿಸುವುದಿಲ್ಲ. ಆರೋಪಿಗಳ ವಿರುದ್ಧ ತಕ್ಕ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಸೂಲಿಬೆಲೆಯಲ್ಲಿ ನಡೆದಂತ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿ ರಾಜಿಯಾಗುವುದಿಲ್ಲ. ನಮ್ಮ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ತ್ವರಿತವಾಗಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. 
ಅಕ್ಟೋಬರ್ ತಿಂಗಳಿನಲ್ಲಿ ಬೆಂಗಳೂರಿನ ಮಡಿವಾಳದ ವ್ಯಾಪ್ತಿಯಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿತ್ತು. ಇದರ ಬೆನ್ನಲ್ಲೇ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.