ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ
ಗುರುವಾರ ನಡೆದ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಬಾಲಕೀಯರ ಮೇಲೆ ಅತ್ಯಾಚಾರ ನಡೆದಿದೆ...

ಕುಷ್ಟಗಿ: ಗುರುವಾರ ನಡೆದ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಬಾಲಕೀಯರ ಮೇಲೆ ಅತ್ಯಾಚಾರ ನಡೆದಿದೆ.
ಅಥಣಿ ತಾಲೂಕಿನ ಮಂಗಸೂಳಿ ಗ್ರಾಮದ ಮನೆಯೊಂದರಲ್ಲಿ ಒಬ್ಬಳೇ ಇದ್ದ ಬಾಲಕಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿದ್ದಾನೆ.ಮಂಗಸೂಳಿ-ಮೋಳೆ ಮಾರ್ಗದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ, ರಸ್ತೆ ಬದಿಯಲ್ಲೇ ಇದ್ದ ಮನೆಯೊಂದರಲ್ಲಿ ಬಾಲಕಿ ಇರುವುದನ್ನು ನೋಡಿದ್ದಾನೆ. ಬಾಲಕಿ ಒಂಟಿಯಾಗಿರುವುದನ್ನು ಗಮನಿಸಿದ ಆತ, ಏಕಾಏಕಿ ಮನೆ ಒಳಗೆ ಬಂದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಬಾಲಕಿಯ ಪೋಷಕರು ಮನೆಗೆ ಬಂದಾಗ ಸಂಗತಿ ತಿಳಿದಿದ್ದು, ಕಾಗವಾಡ ಪೊಲೀಸರಿಗೆ ದೂರು ನೀಡಿದ್ದಾರೆ. ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಅಂಗಡಿ ಅವರ ನೇತೃತ್ವದಲ್ಲಿ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಅಪಹರಿಸಿ ಅತ್ಯಾಚಾರ: ಕುಷ್ಟಗಿ ತಾಲೂಕಿನ ಟಕ್ಕಳಕಿ ಗ್ರಾಮದ ೧೬ ವರ್ಷದ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿದ ವ್ಯಕ್ತಿಯೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಟಕ್ಕಳಕಿಯ ದುರಗಪ್ಪ ಬಂಡಿವಡ್ಡರ್ ಎಂಬ ಯುವಕನನ್ನು ಪೋಕ್ಸೊ ಕಾಯಿದೆಯಡಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


