ಬೆಂಗಳೂರಿನಲ್ಲಿ ಮತ್ತೊಂದು ರೇಪ್: ಇಬ್ಬರು ಆರೋಪಿಗಳ ಬಂಧನ
ಚಲಿಸುತ್ತಿದ್ದ ಬಸ್ಸಿನಲ್ಲಿ ಚಾಲಕನೇ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ...

Published On :
ಬೆಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಚಾಲಕನೇ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ಚಲಿಸುತ್ತಿದ್ದ ಮಿನಿ ಬಸ್ ನಲ್ಲಿ 19 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದೆ.
ನರ್ಸಿಂಗ್ ಹೋಮ್ ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಕೆಲಸಕ್ಕೆ ತೆರಳಲು ನಿನ್ನೆ ಬೆಳಿಗ್ಗೆ ಮಿನಿ ಬಸ್ ಹತ್ತಿದ್ದಳು. ಆದರೆ, ಬಸ್ ನಲ್ಲಿ ಚಾಲಕ ಮತ್ತು ಕ್ಲೀನರ್ ಬಿಟ್ಟರೇ ಯಾರು ಇರಲಿಲ್ಲ. ಈ ವೇಳೆ ಮಿನಿ ಬಸ್ ನ ಎಲ್ಲಾ ಕಿಟಿಕಿಯ ಗಾಜುಗಳನ್ನು ಮುಚ್ಚಿ, ಕ್ಲೀನರ್ ಗೆ ಬಸ್ ಚಲಾಯಿಸುವಂತೆ ಹೇಳಿದ ಚಾಲಕ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ತದ ನಂತರ ಯುವತಿಯನ್ನು ಲಕ್ಕೊಂಡನ ಕ್ರಾಸ್ ಬಳಿ ಇಳಿಸಿ, ಇಬ್ಬರು ಪರಾರಿಯಾಗಿದ್ದಾರೆ. ಅಲ್ಲಿಂದ ಯುವತಿ ಹೊಸಕೋಟೆ ಖಾಸಗಿ ಆಸ್ಪತ್ರೆಗೆ ತೆರಳಿ ವೈದ್ಯರ ಬಳಿ ಘಟನೆ ಬಗ್ಗೆ ವಿವರಿಸಿದ್ದಾಳೆ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಸೂಲಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಸೂಲಿಬೆಲೆ ಪೊಲೀಸರು, ಐಪಿಸಿ ಸೆಕ್ಷನ್ 376ರ ಅಡಿ ಮೊಕದ್ದಮೆ ದಾಖಲು ಮಾಡಿದ್ದಾರೆ. ಅತ್ಯಾಚಾರವೆಸಗಿದ ಶಿವಮೊಗ್ಗ ಮೂಲದ ಮಿನಿ ಬಸ್ ಚಾಲಕ ರವಿ(26), ಚಿಂತಾಮಣಿ ಮೂಲದ ಕ್ಲೀನರ್ ಮಂಜುನಾಥ(23) ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಖಾಸಗಿ ಕಾರ್ಖಾನೆಯೊಂದಕ್ಕೆ ಸೇರಿದ ಈ ಮಿನಿ ಬಸ್ ನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಿಗ್ವಿಲ್ ಗಾರ್ಮೆಂಟ್ಸ್ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಹೊಸಕೋಟೆ ಮೂಲದ ಕೃಷ್ಣ ಮೂರ್ತಿಗೆ ಸೇರಿದ ವಾಹನವಾಗಿದೆ. ಕಳೆದ ಒಂದು ವರ್ಷದಿಂದ ಮಿನಿ ಬಸ್ ಚಾಲಕನಾಗಿ ರವಿ ಕೆಲಸ ಮಾಡುತ್ತಿದ್ದ. 10 ದಿನಗಳ ಹಿಂದೆ ಮಂಜುನಾಥ್ ಕ್ಲೀನರ್ ಆಗಿ ಸೇರಿದ್ದ. ನಿನ್ನೆ ಘಟನೆ ನಂತರವೂ ಆರೋಪಿಗಳು ಯಥಾಸ್ಥಿತಿ ಕೆಲಸಕ್ಕೆ ತೆರಳಿದರು. ಯುವತಿ ನೀಡಿದ ಪೂರ್ಣ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


