ಜಿಲ್ಲಾ ಸುದ್ದಿ

ಮಾರ್ಚ್ ಅಂತ್ಯಕ್ಕೆ ಕಸ ಮುಕ್ತ: ಸಿಎಂ ಭರವಸೆ

ದೊಡ್ಡಬಳ್ಳಾಪುರ ಸಮೀಪದ ಟೆರ್ರಾಫಾರ್ಮರ್ ಮತ್ತು ಎಂಎಸ್‍ಜಿಪಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುತ್ತಿದ್ದ ಕಸವನ್ನು...

ಮಾರ್ಚ್ ಅಂತ್ಯಕ್ಕೆ ಕಸ ಮುಕ್ತ: ಸಿಎಂ ಭರವಸೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ದೊಡ್ಡಬಳ್ಳಾಪುರ ಸಮೀಪದ ಟೆರ್ರಾಫಾರ್ಮರ್ ಮತ್ತು ಎಂಎಸ್‍ಜಿಪಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುತ್ತಿದ್ದ ಕಸವನ್ನು ಹಂತ ಹಂತವಾಗಿ ಕಡಿಮೆ ಮಾಡುವ ಜತೆಗೆ ಟೆರ್ರಾ ಫಾರ್ಮರ್ ಕಂಪೆನಿಯನ್ನು ಮಾರ್ಚ್ ಅಂತ್ಯಕ್ಕೆ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತಿ ್ರ ಸಿದ್ದರಾಮಯ್ಯ ಹೇಳಿದ್ದಾರೆ. 
ಈ ಎರಡು ಘಟಕಗಳ ತ್ಯಾಜ್ಯ ವಿಲೇವಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಥಳೀಯ ಮುಖಂಡರ ಜತೆ ಚರ್ಚೆ ನಡೆಸಿದ ನಂತರ ಈ ಭರವಸೆ ನೀಡಿದ್ದಾರೆ. ಸಭೆಯಲ್ಲಿ ಗ್ರಾಮಸ್ಥರು ಕಸದ ಸಮಸ್ಯೆಯಿಂದ ಆಗುತ್ತಿರುವ ತೊಂದರೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡಿದರು.
ಬೆಂಗಳೂರು ಅಬಿsವೃದಿಟಛಿ ಸಚಿವ ಕೆ.ಜೆ.ಜಾರ್ಜ್, ಮೇಯರ್ ಮಂಜುನಾಥ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಮಾಹಿತಿ ಪಡೆದುಕೊಂಡ ಅವರು, ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಿಗದಿ ಮಾಡಿದ್ದಕ್ಕಿಂತ ಹೆಚ್ಚಿನ ಕಸವನ್ನು ಸಾಗಿಸಲಾಗುತ್ತಿದೆ ಎಂಬ ದೂರು ನನ್ನ ಗಮನಕ್ಕೂ ಬಂದಿದೆ. 
ಪ್ರತಿ ದಿನ 800 ರಿಂದ 1000 ಟನ್‍ನಷ್ಟು ಕಸ ಸಾಗಣೆಯಾಗುತ್ತಿದ್ದು, ಡಿಸೆಂಬರ್ ತಿಂಗಳಿಂದ ಈ ಪ್ರಮಾಣವನ್ನು 600 ಟನ್‍ಗೆ ಇಳಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.