ಜಿಲ್ಲಾ ಸುದ್ದಿ

ಸೋಲು ಬಿಜೆಪಿಯದ್ದಲ್ಲ, ಮೋದಿಯದು: ಮೊಯ್ಲಿ

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಸಹಿಷ್ಣುತೆ ಧೋರಣೆಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ...

ಸೋಲು ಬಿಜೆಪಿಯದ್ದಲ್ಲ, ಮೋದಿಯದು: ಮೊಯ್ಲಿ
ಸಂಸದ ಎಂ.ವೀರಪ್ಪ ಮೊಯ್ಲಿ (ಸಂಗ್ರಹ ಚಿತ್ರ)
Published On :

ಉಡುಪಿ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಸಹಿಷ್ಣುತೆ ಧೋರಣೆಗೆ ತಕ್ಕ ಉತ್ತರ ಸಿಕ್ಕಿದೆ ಎಂದು ಸಂಸದ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿಗೆ ತನ್ನದೇ ಆದ ಘನತೆ ಇರುತ್ತದೆ. ಇದುವರೆಗೆ ದೇಶದ ಯಾವುದೇ ಪ್ರಧಾನಿ ರಾಜ್ಯವೊಂದರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 43 ರ್ಯಾಲಿಗಳನ್ನು ನಡೆಸಿದ ಉದಾಹರಣೆ ಇಲ್ಲ. ಆದರೆ, ನರೇಂದ್ರ ಮೋದಿ ಅವರು ಈ ವಿಧಾನಸಭಾ ಚುನಾವಣೆಯನ್ನು ಲೋಕಸಭಾ ಚುನಾವಣೆಯಂತೆ ನಡೆಸಿದರು.

ಬಿಜೆಪಿಯ ಸ್ಥಳೀಯ ನಾಯಕರನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಕೇಂದ್ರದ ತನಗಿಂತ ಹಿರಿಯ ನಾಯಕರಿಗೂ ಚುನಾವಣಾ ಪ್ರಚಾರದ ಅವಕಾಶ ನೀಡಲಿಲ್ಲ. ಹೀಗಾಗಿ ಬಿಹಾರದಲ್ಲಿ ಸೋಲು ಕೇವಲ ಬಿಜೆಪಿಯದಲ್ಲ, ಅದು ಮೋದಿಯ ಸೋಲೂ ಹೌದು ಎಂದು ವಿಶ್ಲೇಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.