ದೀಪಾವಳಿಗೆ ವಿಶೇಷ ಸಾರಿಗೆ
ದೀಪಾವಳಿ ಹಬ್ಬದ ಪ್ರಯುಕ್ತ ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ...

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ ಬುಧವಾರದವರೆಗೆ ಕೆಎಸ್‍ಆರ್‍ಟಿಸಿಯಿಂದ 500 ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಮೈಸೂರು, ಹುಣಸೂರು, ಪಿರಿಯಾಪಟ್ಟಣ, ರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಹೋಗುವ ಪ್ರಯಾಣಿಕರಿಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಏರ್ಪಡಿಸಲಾಗಿದೆ. ಮಧುರೈ, ಕುಂಬಕೋಣಂ, ತಿರುಚಿ, ಚೆನೈ, ಕೊಯಮತ್ತೂರ್, ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೆ ಹೋಗುವ ಪ್ರಯಾಣಿಕರಿಗೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನ ಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಕೆಂಗೇರಿಯ ಉಪನಗರಗಳಿಂದ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ, ಕಲ್ಪಿಸಲಾಗಿದೆ.
ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಿಜಾಪುರ, ಗೋಕರ್ಣ, ಶಿರಸಿ, ಕಾರವಾರ ಕಡೆಗೆ ಹೋಗುವ ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಬಸ್‍ಗಳನ್ನು ಮೈಸೂರು ರಸ್ತೆ ಸ್ಯಾಟ್‍ಲೈಟ್ ಬಸ್ ಲ್ದಾಣದಿಂದ ಹೊರಡುತ್ತವೆ. ಕಲಬುರ್ಗಿ, ಬಳ್ಳಾರಿ, ರಾಯಚೂರು, ಹೊಸಪೇಟೆ,ಕೊಪ್ಪಳ, ಯಾದಗಿರಿ, ಬೀದರ್ ಕಡೆಗೆ ಹೋಗುವವರು ಬಸವೇಶ್ವರ ಬಸ್ ನಿಲ್ದಾಣ (ಪೀಣ್ಯ)ಕ್ಕೆ ತೆರಳಬಹುದಾಗಿದೆ.
ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‍ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸಿ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ ರಿಶೀಲಿಸಬೇಕೆಂದು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


