ಮಡಿಕೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಗಲಭೆಗೆ ಮತ್ತೋರ್ವ ಬಲಿ
ಟಿಪ್ಪು ಜಯಂತಿ ಕಾರ್ಯಕ್ರಮ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಆಸ್ಪತ್ರೆಯ ಕೋಣೆಯ...

ಮಡಿಕೇರಿ: ಟಿಪ್ಪು ಜಯಂತಿ ಕಾರ್ಯಕ್ರಮ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಆಸ್ಪತ್ರೆಯ ಕೋಣೆಯ ಹೊರಗೆ ನಿಂತು ವೀಕ್ಷಿಸುತ್ತಿದ್ದ ವ್ಯಕ್ತಿ ಮಹಡಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ರಾಜು ಎಂದು ಗುರುತಿಸಲಾಗಿದೆ.
ಘಟನೆ ವಿವರ: ಇಂದು ಬೆಳಗ್ಗೆ 10.30ರ ಸುಮಾರಿಗೆ ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವಿಎಚ್ ಪಿ ಮುಖಂಡರು ಪ್ರತಿಭಟನೆಗೆ ಇಳಿದರು. ಕಲ್ಲು ತೂರಾಟ ನಡೆಯಿತು. ಇಡೀ ಮಡಿಕೇರಿ ನಗರವೇ ಕೆಲ ಹೊತ್ತಿನಲ್ಲಿ ಉದ್ವಿಗ್ನಗೊಂಡಿತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಅಶ್ರುವಾಯು ಸಿಡಿಸಿದರು. ಪ್ರತಿಭಟನಾಕಾರರು ಜಿಲ್ಲಾಸ್ಪತ್ರೆ ಮುಂದೆ ಹೋಗುತ್ತಿದ್ದಾಗ ಅಲ್ಲಿ ಕಳೆದೆರಡು ದಿನಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜು ಎಂಬ ವ್ಯಕ್ತಿ ಘಟನೆಯನ್ನು ನೋಡಲೆಂದು ಕೋಣೆಯಿಂದ ಹೊರಗೆ ಬಂದಿದ್ದರು. ಅಲ್ಲಿ ಗುಂಪು ಸೇರಿತು. ಗುಂಪನ್ನು ಚದುರಿಸಲೆಂದು ಪೊಲೀಸರು ಲಾಠಿ ಪ್ರಹಾರ ನಡೆಸಲು ಆರಂಭಿಸಿದರು. ಆಗ ಓಡಿಹೋದ ರಾಜು ಆಕಸ್ಮಿಕವಾಗಿ ಆಸ್ಪತ್ರೆಯ ಮಹಡಿಯಿಂದ ಕೆಳಗೆ ಬಿದ್ದರು. ತೀವ್ರ ಗಾಯದಿಂದ ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾರೆ.
ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಆರು ಮಂದಿಗೆ ಗಾಯಗಳಾಗಿವೆ.ಇದೀಗ ಮಡಿಕೇರಿ ಸೇರಿದಂತೆ ಸುತ್ತಮುತ್ತಲ ತಾಲ್ಲೂಕುಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೆಚ್ಚುವರಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಐಪಿಸಿ ಸೆಕ್ಷನ್ 144 ಜಾರಿಯಲ್ಲಿದೆ.
ದಕ್ಷಿಣ ವಲಯ ಐಜಿಪಿ ಬಿ.ಕೆ.ಸಿಂಗ್ ಮಾತನಾಡಿ, ಇಬ್ಬರು ವ್ಯಕ್ತಿಗಳು ಪೊಲೀಸರ ಲಾಠಿ ಚಾರ್ಜ್ ನಿಂದ ಸತ್ತಿಲ್ಲ, ಓಡಿಹೋಗುವಾಗ ಬಿದ್ದು ಪೆಟ್ಟಾಗಿ ಸಾವನ್ನಪ್ಪಿದ್ದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


