ಜಿಲ್ಲಾ ಸುದ್ದಿ

ಕಬ್ಬನ್ ಪಾರ್ಕ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್, ಇಬ್ಬರ ಬಂಧನ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದೆ. ನಗರದ ಹೃದಯ ಭಾಗದಲ್ಲಿರುವ ಕಬ್ಬನ್...

ಕಬ್ಬನ್ ಪಾರ್ಕ್‌ನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ರೇಪ್, ಇಬ್ಬರ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಿದೆ. ನಗರದ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್‌ನಲ್ಲೇ ಬುಧವಾರ ರಾತ್ರಿ ಮಹಿಳೆಯೊಬ್ಬರ ಮೇಲೆ ನಾಲ್ವರು ಕಾಮುಕ ಸೆಕ್ಯೂರಿಟಿ ಗಾರ್ಡ್ ಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ನಿನ್ನೆ ರಾತ್ರಿ 10ಗಂಟೆ ಸುಮಾರಿಗೆ ಟೆನಿಸ್ ತರಬೇತಿ ಕುರಿತು ಮಾಹಿತಿ ಪಡೆಯಲಿಕ್ಕಾಗಿ ಟೆನ್ನಿಸ್ ಸ್ಟೇಡಿಯಂ ಕಡೆ ಬರುತ್ತಿದ್ದ 34 ವರ್ಷದ ಮಹಿಳೆಯನ್ನು ದಾರಿ ತೋರಿಸುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಾಲ್ವರು ಸೆಕ್ಯೂರಿಟಿ ಗಾರ್ಡ್ ಗಳು ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೊಂದ ಮಹಿಳೆ ತುಮಕೂರು ಮೂಲದವರಾಗಿದ್ದು, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.