ಮಕ್ಕಳಿಗೆ ಬಾಲಭವನದಲ್ಲಿ ಶೌರ್ಯ ಪ್ರಶಸ್ತಿ ಪ್ರದಾನ
ರತಿಭೆ ಮತ್ತು ಜ್ಞಾನ ಕೇವಲ ಶ್ರೀಮಂತ ಮಕ್ಕಳಲ್ಲಷ್ಟೇ ಇರುವುದಿಲ್ಲ. ಕೂಲಿ ಕಾರ್ಮಿಕನ ಮಗನೂ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ಸ್ವೀಕರಿಸುತ್ತಾನೆ ಎಂದು ..

ಬೆಂಗಳೂರು: ಪ್ರತಿಭೆ ಮತ್ತು ಜ್ಞಾನ ಕೇವಲ ಶ್ರೀಮಂತ ಮಕ್ಕಳಲ್ಲಷ್ಟೇ ಇರುವುದಿಲ್ಲ. ಕೂಲಿ ಕಾರ್ಮಿಕನ ಮಗನೂ ವಿಶ್ವವಿದ್ಯಾಲಯದಲ್ಲಿ ಚಿನ್ನದ ಪದಕ ಸ್ವೀಕರಿಸುತ್ತಾನೆ ಎಂದು ರಾಜ್ಯಪಾಲ ವಜುಬಾಯ್ ವಾಲಾ ಹೇಳಿದ್ದಾರೆ.
ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಕ್ಷರ ಜ್ಞಾನಕ್ಕಿಂತ ಸಂಸ್ಕಾರ ಮುಖ್ಯ ಎಂದು ಅವರು, ಅಮೆರಿಕದಲ್ಲಿ ಜ್ಞಾನ ಇದೆ, ಆದರೆ ಸಂಸ್ಕಾರವಿಲ್ಲ. ಆದರೆ ಭಾರತದಲ್ಲಿ ಸಂಸ್ಕಾರಕ್ಕೆ ಕೊರತೆಯಿಲ್ಲ ಎಂದು ಹೇಳಿದರು. ಮಕ್ಕಳಿಗೆ ಸಂಸ್ಕಾರ ಬಹಳ ಮುಖ್ಯ ಎಂದು ರಾಜ್ಯಪಾಲರು ಅಭಿಪ್ರಾಯ ಪಟ್ಟರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಾಗಿ ಮಕ್ಕಳಿಗೆ ಶೌರ್ಯ ಪ್ರಶಸ್ತಿಯನ್ನು ಸಚಿವ ಕೆ.ಜೆ.ಜಾರ್ಜ್ ವಿತರಿಸಿದರು.ಹೊಯ್ಸಳ ಶೌರ್ಯ ಪ್ರಶಸ್ತಿಯನ್ನು ಸಿದ್ದೇಶ್ ಎಂ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಸಿಯಾ ಖೊಡೆ ಪಡೆದುಕೊಂಡರು. ಜತೆ ಜೊತೆಗೆ ನಾಲ್ಕು ಸಂಘ-ಸಂಸ್ಥೆಗಳು ನಾಲ್ಕು ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡವು. ಇದಲ್ಲದೇ ಅಸಾಧಾರಣ ಪ್ರತಿಭಾ ಪ್ರದರ್ಶನ ನೀಡಿದ್ದಕ್ಕಾಗಿ 26 ಮಕ್ಕಳಿಗೆ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


