ದಕ್ಷಿಣ ಕನ್ನಡ ಬಂದ್: ತಡರಾತ್ರಿ ಮತ್ತಿಬ್ಬರ ಮೇಲೆ ಹಲ್ಲೆ
ದಕ್ಷಿಣ ಕನ್ನಡ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂಸಾಚಾರದ ಪ್ರಕರಣಗಳು ಮುಂದುವರಿದ್ದು...

Published On :
ಉಪ್ಪಿನಂಗಡಿ/ಮಂಗಳೂರು: ದಕ್ಷಿಣ ಕನ್ನಡ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹಿಂಸಾಚಾರದ ಪ್ರಕರಣಗಳು ಮುಂದುವರಿದ್ದು, ಶುಕ್ರವಾರ ತಡರಾತ್ರಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಕಲ್ಲೇರಿಯ ಶಿವಗಿರಿ ಎಂಬಲ್ಲಿ ಪ್ರದೀಪ್ (30) ಎಂಬ ಯುವಕನಿಗೆ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದಾಗ ಪ್ರದೀಪ್ ಕಲ್ಲೇರಿಯಿಂದ ಶಿವಗಿರಿಯಲ್ಲಿನ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.
ತೀವ್ರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ತಂಡ ತಡೆದು ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ವೀರಭದ್ರ ದೇವಾಲಯದ ಬಳಿ ನಡೆದಿದೆ.
ಸ್ಥಳೀಯ ಇಕ್ಬಾಲ್ (35) ಗಂಭೀರ ಗಾಯಗೊಂಡಿದ್ದಾರೆ. ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿದ ಬಾಟಲಿಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


