ಜಿಲ್ಲಾ ಸುದ್ದಿ

ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರ ನಿಗಾ: ಸದಾನಂದ ಗೌಡ

ರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆ ಬಗ್ಗೆ ಕೇಂದ್ರ ಸರ್ಕಾರ ಗಮನ ಇರಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ತಿಳಿಸಿದ್ದಾರೆ...

ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರ ನಿಗಾ: ಸದಾನಂದ ಗೌಡ
ಕೇಂದ್ರ ಕಾನೂನು ಸಚಿವ ಸದಾನಂದ ಗೌಡ (ಸಂಗ್ರಹ ಚಿತ್ರ)
Published On :

ಪುತ್ತೂರು/ಬಂಟ್ವಾಳ: ರಾಜ್ಯದ ಕಾನೂನು ಹಾಗೂ ಸುವ್ಯವಸ್ಥೆ ಬಗ್ಗೆ ಕೇಂದ್ರ ಸರ್ಕಾರ ಗಮನ ಇರಿಸಿದೆ. ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದ ಗೌಡ ತಿಳಿಸಿದ್ದಾರೆ.

ಪುತ್ತೂರು ಬೊಳುವಾರು ಶ್ರೀ ಉಳ್ಳಾಲ್ತಿ ಮಲರಾಯ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂ ದಿಗೆ ಮಾತನಾಡಿದರು. ಸಿಎಂ ಸ್ವಯಂಕೃತಾಪರಾಧ: ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪ ಚೂರಿ ಇರಿತದಿಂದ ಮೃತಪಟ್ಟ ಹರೀಶ್ ಪೂಜÁರಿ ಮನೆಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸದಾನಂದ ಗೌಡರು,
ಟಿಪ್ಪು ಹೆಸರಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಮುಖ್ಯ ಮಂತ್ರಿಗಳ ಸ್ವಯಂಕೃತ ಅಪರಾಧ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪರಿಸ್ಥಿತಿ ನಿಭಾಯಿಸುವಲ್ಲಿ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

`ಟಿಪ್ಪು ಜಯಂತಿ ಬಗ್ಗೆ ವಿಧಾನಸಭೆ, ವಿಧಾನ ಪರಿಷತ್‍ನಿಂದ ತೊಡಗಿ ಜನಸಾಮಾ ನ್ಯನಿಂದಲೂ ವಿರೋಧ ಕೇಳಿಬಂದರೂ ಅದನ್ನು ನಡೆಸಿರುವ ಉದ್ದೇಶ ಏನು? ಹಾಗಿದ್ದರೂ ಟಿಪ್ಪು ಜಯಂತಿಯ ಆಚರಣೆ ಅಗತ್ಯವಿತ್ತೆ' ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.