ಮದನಿ ಪರ ಸಾಕ್ಷ್ಯಕ್ಕೆ ಒತ್ತಡ ಹೇರುತ್ತಿದ್ದಾತ ಸೆರೆ
ಬೆಂಗಳೂರಿನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್ ಪ್ರಕರಣ ಸಂಬಂಧ ಬಂಧಿತನಾಗಿರುವ ಅಬ್ದುಲ್ ನಾಜೀರ್ ಮದನಿ ಪರವಾಗಿ ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯುವಂತೆ ಸಾಕ್ಷಿದಾರನ ಮೇಲೆ ಒತ್ತಡ ಹೇರುತ್ತಿರುವುದು ಬೆಳಕಿಗೆ ಬಂದಿದೆ...

ಬೆಂಗಳೂರು: ಬೆಂಗಳೂರಿನಲ್ಲಿ 2008ರಲ್ಲಿ ನಡೆದ ಸರಣಿ ಬಾಂಬ್ ಪ್ರಕರಣ ಸಂಬಂಧ ಬಂಧಿತನಾಗಿರುವ ಅಬ್ದುಲ್ ನಾಜೀರ್ ಮದನಿ ಪರವಾಗಿ ನ್ಯಾಯಾಲಯದಲ್ಲಿ ಸಾಕ್ಷಿ ನುಡಿಯುವಂತೆ ಸಾಕ್ಷಿದಾರನ ಮೇಲೆ ಒತ್ತಡ ಹೇರುತ್ತಿರುವುದು ಬೆಳಕಿಗೆ ಬಂದಿದೆ.
ಕೊಚ್ಚಿನ್ ಸಮೀಪ ಇತ್ತೀಚೆಗೆ ನಾಜೀರ್ ಎಂಬಾತನನ್ನು ಕೇರಳ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಕೆಲ ದಾಖಲೆ ಲಭ್ಯವಾಗಿದ್ದವು. ಪರಿಶೀಲನೆ ನಡೆಸಿದಾಗ ಅದರಲ್ಲಿ ಬೆಂಗಳೂರು ಸರಣಿ ಸ್ಪೋಟದ ಸಾಕ್ಷಿಗಳು ಹಾಗೂ ವಿವಿರಗಳು ಇದ್ದವು. ಈ ಬಂಧಿತ ಆರೋಪಿ ಸಾಕ್ಷಿಗಳ ಮೇಲೆ ಒತ್ತಡ ಹೇರಿ ಮದನಿ ಪರವಾಗಿ ಹೇಳಿಕೆಗಳನ್ನು ನ್ಯಾಯಾಲಯದಲ್ಲಿ ನುಡಿಸುವ ಮೂಲಕ ಮದನಿಯನ್ನು ಬಚಾವ್ ಮಾಡಲು ಯೋಜಿಸಿದ್ದ.
ಈ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ನಗರ ಪೊಲೀಸರ ಒಂದು ತಂಡ ಕೇರಳಕ್ಕೆ ತೆರಳಿದ್ದು ಬಂಧಿತ ಆರೋಪಿ ನಾಜೀರ್ ವಿಚಾರಣೆ ನಡೆಸಿದೆ. ಆರೋಪಿ ಬಳಿ ದಾಖಲೆಗಳ ಪರಿಶೀಲಿಸಿ ಅಗತ್ಯ ಬಿದ್ದರೆ ಆತನನ್ನು ವಶ ತೆಗೆದುಕೊಂಡು ನಗರಕ್ಕೆ ಕರೆತರುವ ಸಾಧ್ಯತೆ ಇದೆ ಎಂದು ಹಿರಿಯ ಪೊಲಿಸ್ ಅಧಿಕಾರಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


