ಜಿಲ್ಲಾ ಸುದ್ದಿ

ಶಾಸಕ ಗುರುಪಾದಪ್ಪ ಅಂತ್ಯಕ್ರಿಯೆ

ಔರಾದ್ ತಾಲೂಕಿನ ಚಿಂತಾಕಿ ಗ್ರಾಮದ ತೋಟದಲ್ಲಿ ಬುಧವಾರ ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ನೆರವೇರಿತು....

ಶಾಸಕ ಗುರುಪಾದಪ್ಪ ಅಂತ್ಯಕ್ರಿಯೆ
ಗುರುಪಾದಪ್ಪ ನಾಗಮಾರಪಳ್ಳಿ
Published On :

ಬೀದರ್/ಔರಾದ್: ಔರಾದ್ ತಾಲೂಕಿನ ಚಿಂತಾಕಿ ಗ್ರಾಮದ ತೋಟದಲ್ಲಿ ಬುಧವಾರ ಶಾಸಕ ಗುರುಪಾದಪ್ಪ ನಾಗಮಾರಪಳ್ಳಿ ಅಂತ್ಯಕ್ರಿಯೆ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಬಸವ ತತ್ವದ ವಿಧಿ ವಿಧಾನದಂತೆ ಅವರ ಪತ್ನಿ ಸರಸ್ವತಿ ನಾಗಮಾರಪಳ್ಳಿ ಸಮಾಧಿ ಪಕ್ಕದಲ್ಲಿಯೇ ಅಂತಿಮ ಸಂಸ್ಕಾರ ನಡೆಸಲಾಯಿತು.

ಪುತ್ರ ಉಮಾಕಾಂತ ನಾಗಮಾರಪಳ್ಳಿಗೆ ತಂದೆಯ ಪೇಟ ತೋಡಿಸಿ ತಂದೆಯ ಜವಾಬ್ದಾರಿ ಪುತ್ರನ ಹೆಗಲಿಗೆ ಹಾಕಲಾಯಿತು. ಡಾ. ಬಸವಲಿಂಗ ಪಟ್ಟದ್ದೇವರು ಹಾಗೂ ಹುಲಸೂರು ಶಿವಾನಂದಶ್ರೀಗಳು ಅಂತ್ಯಕ್ರಿಯೆ ವಿಧಿವಿಧಾನ ಪೂರೈಸಿದರು. ಸರ್ಕಾರದ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಅವರು ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಇನ್ನು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ಸೂಚಿಸಿ ಮೂರು ಸುತ್ತು ಕುಶಾಲ ಗುಂಡುಗಳನ್ನು ಸಿಡಿಸಿ ಗೌರವ ಸಲ್ಲಿಸಲಾಯಿತು.

ಗಣ್ಯರ ನಮನ: ಮಾಜಿ ಮುಖ್ಯಮಂತ್ರಿ ಧರಂಸಿಂಗ್, ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್,ಮಾಜಿ ಸಚಿವ ವಿ. ಸೋಮಣ್ಣ, ರೇವುನಾಯಕ  ಬೆಳಮಗಿ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ, ಪ್ರಭು ಚವ್ಹಾಣ, ಈಶ್ವರ ಖಂಡ್ರೆ, ಮಾಜಿ ಶಾಸಕ ಬಂಡೆಪ್ಪ ಖಾಶೆಂಪುರ  ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.