ಮಾಜಿ ಶಾಸಕ ಶಂಕರಲಿಂಗೇ ಗೌಡರ ಪುತ್ರ ಆತ್ಮಹತ್ಯೆಗೆ ಯತ್ನ
ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.

ಮೈಸೂರು: ಮಾಜಿ ಶಾಸಕ ಶಂಕರಲಿಂಗೇಗೌಡ ಅವರ ಪುತ್ರ ನಾಗೇಶ್ ಪ್ರೀತಂ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಶನಿವಾರ ನಡೆದಿದೆ.
ಇಂದು ಬೆಳಗ್ಗೆ ವಾಯು ವಿಹಾರಕ್ಕೆ ವೇಳೆ ನಾಗೇಶ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಾಗೇಶ್ ಅವರು ಆತ್ಮಹತ್ಯೆ ಯತ್ನಿಸಿರಬಹುದು ಎಂದು ಶಂಕಿಸಲಾಗಿದೆ.
ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅವರು 2014ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ರಾಜಕೀಯ ಕ್ಷೇತ್ರದಿಂದ ದೂರವಿದ್ದ ನಾಗೇಶ್ ಪ್ರೀತಂ ಉದ್ಯಮ ನಡೆಸುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


