ಸಣ್ಣ ಉದ್ದಿಮೆಗಳ ಪ್ರಗತಿಗೆ ಕೇಂದ್ರದ ಒತ್ತು
ತಾಲೂಕಿನ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕೇಂದ್ರ ಕಚೇರಿಯನ್ನು ಕೇಂದ್ರ ಸರ್ಕಾರದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ಕಲ್‍ರಾಜ್ ಮಿಶ್ರಾ ಶನಿವಾರ ಸಂಜೆ ಉದ್ಘಾಟಿಸಿದರು...

ಬೆಳ್ತಂಗಡಿ: ತಾಲೂಕಿನ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕೇಂದ್ರ ಕಚೇರಿಯನ್ನು ಕೇಂದ್ರ ಸರ್ಕಾರದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ಕಲ್‍ರಾಜ್ ಮಿಶ್ರಾ ಶನಿವಾರ ಸಂಜೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕಲ್‍ರಾಜ್ ಮಿಶ್ರಾ, ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು
ನೀಡುತ್ತಿದೆ. ಸ್ಥಳೀಯ ಉದ್ಯೋಗಾವಕಾಶಗಳಿಗೆ ಪೂರಕವಾದ ತರಬೇತಿಗಳನ್ನು ಸ್ಥಳೀಯವಾಗಿಯೇ ಒದಗಿಸಲು ಕೇಂದ್ರಗಳಿಗೆ ಉತ್ತೇಜನ ನೀಡಲಾಗುವುದು. ಸರ್ಕಾರವು ಅಂತರ್ಜಾಲದ ಮೂಲಕ ಉದ್ಯೋಗಗಳನ್ನು ಗುರುತಿಸಿ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಯುವಜನತೆಗೆ ಪದವಿಯ ನಂತರ ಉದ್ಯೋಗಗಳನ್ನು ಆರಂಬಿsಸಲು, ಅದಕ್ಕೆ ಪೂರಕವಾದ ಯಂತ್ರೋಪಕರಣಗಳನ್ನು ಖರೀದಿಸಲು ಉತ್ತೇಜನ ನೀಡಲಾಗುವುದು ಎಂದರು. ಸಣ್ಣ ಉದ್ದಿಮೆಗಳನ್ನು ನಡೆಸುವಾಗ ಬರುವ ಕಠಿಣ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ವಿಶೇಷ ಯೋಜನೆ ಸಿದ್ಧಪಡಿಸಿದೆ. ಅಲ್ಲದೆ ಉದ್ದಿಮೆಗಳ ನೋಂದಣಿಗೂ ಸುಲಲಿತ ವ್ಯವಸ್ಥೆಯನ್ನು ಮಾಡಿದೆ ಎಂದರು. ಸಂಸ್ಥೆ ಅಧ್ಯಕ್ಷ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆ, ಆಡಳಿತ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ನಿರ್ದೇಶಕಿ ಮನೋರಮಾ ಭಟ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


