ಜಿಲ್ಲಾ ಸುದ್ದಿ

ಡಿ. 1ರಿಂದ ಲಾರಿ ಮುಷ್ಕರ ಆರಂಭ

ಸರಕು ಸಾಗಣೆ ಹಾಗೂ ಖಾಸಗಿ ವಾಹನಗಳಿಗೆ ವೇಗ ನಿಯಂತ್ರಕ (ಸ್ಪೀಡ್ ಗವರ್ನರ್) ಅಳವಡಿಸಿಕೊಳ್ಳಬೇಕೆಂದು ಸರ್ಕಾರ...

ಡಿ. 1ರಿಂದ ಲಾರಿ ಮುಷ್ಕರ ಆರಂಭ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸರಕು ಸಾಗಣೆ ಹಾಗೂ ಖಾಸಗಿ ವಾಹನಗಳಿಗೆ ವೇಗ ನಿಯಂತ್ರಕ (ಸ್ಪೀಡ್  ಗವರ್ನರ್) ಅಳವಡಿಸಿಕೊಳ್ಳಬೇಕೆಂದು ಸರ್ಕಾರ ಹೊರಡಿಸಿರುವ ಆದೇಶವನ್ನು ಹಿಂಪಡೆ ಯುವಂತೆ ಆಗ್ರಹಿಸಿ ರಾಜ್ಯ ಲಾರಿ ಮಾಲೀಕರು ಮತ್ತು ಚಾಲಕರ ಸಂಘ ಡಿ. 1ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದೆ.

ಈ ಮುಷ್ಕರಕ್ಕೆ ಖಾಸಗಿ ಬಸ್‍ಗಳು ಹಾಗೂ ವಾಣಿಜ್ಯ ವಾಹನಗಳ ಸಂಘಟನೆಗಳೂ ಬೆಂಬಲ  ವ್ಯಕ್ತಪಡಿಸಿದ್ದು, 4 ಲಕ್ಷಕ್ಕೂ ಅಧಿಕ ಲಾರಿಗಳು ಹಾಗೂ ಸಾವಿರಾರು ಖಾಸಗಿ ಬಸ್‍ಗಳು ಸಂಪೂರ್ಣವಾಗಿ ಸಂಚಾರ ಸ್ಥಗಿತಗೊಳಿಸಲಿವೆ ಎಂದು ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ತಿಳಿಸಿದ್ದಾರೆ.

ಸರಕು ಸಾಗಣೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆಗೆ ಕೇಂದ್ರ ಸರ್ಕಾರ ಏ.1ರವರೆಗೆ  ಗಡುವು ನೀಡಿದೆ. ಈ ನಡುವೆ ರಾಜ್ಯ ಸರ್ಕಾರ ಈ ಆದೇಶವನ್ನು ಚರ್ಚೆಗೆ ತರದೆ ಸ್ಪೀಡ್  ಗವರ್ನರ್ ಅಳವಡಿಸಿಕೊಳ್ಳಲು ಸೂಚಿಸಿದೆ. ಹೀಗಾದರೆ ಬೇರೆ ರಾಜ್ಯಗಳಿಗಿಂತ ಮೊದಲೇ  ನಮ್ಮ ರಾಜ್ಯದಲ್ಲಿ ಅಳವಡಿಕೆ ಮಾಡಿದಂತಾಗುತ್ತದೆ. ಹೊಸ ಲಾರಿಗಳಿಗೆ ಸ್ಪೀಡ್ ಗವರ್ನರ್ ಅಳವಡಿಸುವುದು ಸೂಕ್ತ, ಆದರೆ ಹಳೆ ಲಾರಿಗಳಿಗೂ ಅಳವಡಿಸಲು ಸೂಚಿಸಿರುವುದು  ಅವೈಜ್ಞಾನಿಕ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.