ನ.25ಕ್ಕೆ ಹುಚ್ಚ ವೆಂಕಟ್ ಜಾಮೀನು ಅರ್ಜಿ ಭವಿಷ್ಯ ನಿರ್ಧಾರ
ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲು ಪಾಲಾಗಿರುವ ನಟ ಹುಚ್ಚ ವೆಂಕಟ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಸಿಟಿ ಸಿವಿಲ್ ಕೋರ್ಟ್ ನವೆಂಬರ್ 25ಕ್ಕೆ ಕಾಯ್ದಿರಿಸಿದೆ...

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಜೈಲು ಪಾಲಾಗಿರುವ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಸಿಟಿ ಸಿವಿಲ್ ಕೋರ್ಟ್ ನವೆಂಬರ್ 25ಕ್ಕೆ ಕಾಯ್ದಿರಿಸಿದೆ.
ಹುಚ್ಚ ವೆಂಕಟ್ ಜಾಮೀನು ಅರ್ಜಿ ಕುರಿತಂತೆ ಇಂದು ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು ತೀರ್ಪನ್ನು ನವೆಂಬರ್ 25ಕ್ಕೆ ಕಾಯ್ದಿರಿಸಿದರು. ಈ ಹಿಂದೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಪೊಲೀಸರಿಂದ ಬಂಧನಕ್ಕೀಡಾಗಿದ್ದ ಹುಚ್ಚ ವೆಂಕಟ್ ಗೆ ನ್ಯಾಯಾಲಯ ಫೆ.14ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ನಡುವೆ ಹುಚ್ಚ ವೆಂಕಟ್ ಪರ ವಕೀಲರು ವೆಂಕಟ್ ಗೆ ಜಾಮೀನು ನೀಡಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ನವೆಂಬರ್ 25ರಂದು ತನ್ನ ತೀರ್ಪು ನೀಡುವುದಾಗಿ ಹೇಳಿದೆ. ಹೀಗಾಗಿ ಹುಚ್ಚ ವೆಂಕಟ್ ನವೆಂಬರ್ 25ರವರೆಗೆ ಜೈಲಿನಲ್ಲಿಯೇ ಕಾಲ ಕಳೆಯಬೇಕಿದೆ. ಪ್ರಸ್ತುತ ಹುಚ್ಚ ವೆಂಕಟ್ ಪರಪ್ಪನ ಅಗ್ರಹಾರ ಜೈಲಿನಲ್ಲಿನಲ್ಲಿದ್ದು, ಜಾಮೀನು ಅರ್ಜಿಯ ತೀರ್ಪು ಬರುವವರೆಗೂ ಅವರು ಅಲ್ಲಿಯೇ ಇರಬೇಕಾಗಿದೆ.
ಈ ಹಿಂದೆ ಖಾಸಗಿ ಟಿವಿ ಚಾನೆಲ್ ವೊಂದರ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಬಗ್ಗೆ ಕೇಳಲಾದ ಪ್ರಶ್ನೆಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು. ಅಲ್ಲದೇ ಈ ಬಗ್ಗೆ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹುಚ್ಚ ವೆಂಕಟ್ ಅವರು ಇತ್ತೀಚೆಗೆ ಜ್ಞಾನಭಾರತಿ ಪೊಲೀಸರಿಗೆ ಶರಣಾಗಿದ್ದರು.
ಬಳಿಕ ಅವರನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾಗ, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ಶನಿವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸೋಮವಾರಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ನವೆಂಬರ್ 25ಕ್ಕೆ ಕಾಯ್ದಿರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


