ಜಿಲ್ಲಾ ಸುದ್ದಿ

ಚಾರ್ಜಿಂಗ್ ವೇಳೆ ಮೊಬೈಲ್ ಸ್ಫೋಟ; ಬಾಲಕನ ಕಣ್ಣಿಗೆ ತೀವ್ರ ಹಾನಿ

ಮೊಬೈಲ್ ಬ್ಯಾಟರಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡ ಪರಿಣಾಮ ಬಾಲಕನೋರ್ವನ ಕಣ್ಣಿಗೆ ತೀವ್ರ ಹಾನಿಯಾಗಿದೆ...

ಚಾರ್ಜಿಂಗ್ ವೇಳೆ ಮೊಬೈಲ್ ಸ್ಫೋಟ; ಬಾಲಕನ ಕಣ್ಣಿಗೆ ತೀವ್ರ ಹಾನಿ
ಮೊಬೈಲ್ ಸ್ಫೋಟದಿಂದ ಬಾಲಕನ ಕಣ್ಣಿಗೆ ಹಾನಿ (ಸಂಗ್ರಹ ಚಿತ್ರ)
Published On :

ಬೆಂಗಳೂರು ಗ್ರಾಮಾಂತರ: ಮೊಬೈಲ್ ಬ್ಯಾಟರಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಮೊಬೈಲ್ ಸ್ಫೋಟಗೊಂಡ ಪರಿಣಾಮ ಬಾಲಕನೋರ್ವನ ಕಣ್ಣಿಗೆ ತೀವ್ರ ಹಾನಿಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯ ಪುರದಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ಧನ್ ಸಿಂಗ್ ಕಣ್ಣಿಗೆ ತೀವ್ರ ಹಾನಿಯಾಗಿದೆ. ಧನ್ ಸಿಂಗ್ ನ ಎಡಗಣ್ಣು  ಸಂಪೂರ್ಣ ಛಿದ್ರಗೊಂಡಿದ್ದು, ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಸ್ತುತ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯ ಮೂಲಗಳ ಪ್ರಕಾರ ಧನ್ ಸಿಂಗ್ ನ  ಎಡಗಣ್ಣು ಚಿಕಿತ್ಸೆ ನೀಡಲಾಗದಷ್ಟು ಹಾನಿಗೊಳಗಾಗಿದೆ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.