ರೌಡಿ ಕಪಾಲಿಯ ನಾಲ್ವರು ಸಹಚರರ ಸೆರೆ
ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಪರಾಧ ಕೃತ್ಯಗಳಲ್ಲಿ ತೊಡಗಲು ಸಂಚು ರೂಪಿಸಿದ್ದ ಎರಡು ಕುಖ್ಯಾತ ರೌಡಿಗಳ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಅಪಹರಣ ಮಾಡಿ ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸಿದ್ದ ರೌಡಿಗಳ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಕುಖ್ಯಾತ ರೌಡಿ ಆನಂದ್ ಅಲಿಯಾಸ್ ಕಪಾಲಿ ಮತ್ತು ಆತನ ಸಹಚರರಾದ ರಾಜರಾಜನ್, ಎನ್. ರವಿ, ಪ್ರೇಮ್ ಕುಮಾರ್ ಮತ್ತು ಚರಣ್ ಬಂಧಿತರು. ನಿನ್ನೆ ರಾತ್ರಿ ಮಾಗಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ಅಪಹರಣ ಮಾಡಿ ದರೋಡೆ ಮಾಡಲು ಸಂಚು ರೂಪಿಸಿದ್ರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿಆರೋಪಿಗಳಿಂದ ಮೂರು ಲಾಂಗು, ಖಾರದ ಪುಡಿ ಮತ್ತು ಎರಡು ಬೈಕ್ ವಶಪಡಿಸಿಕೊಂಡಿದ್ದಾರೆ.
ಇನ್ನು ಸಿಸಿಬಿ ಅಧಿಕಾರಿಗಳು ಕೊಲೆ, ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ರೌಡಿಗಳನ್ನು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದ ಪೈಪ್‌ಲೈನ್ ರಸ್ತೆಯಲ್ಲಿ ಮಾರಕಾಸ್ತ್ರಗಳೊಂದಿಗೆ ಹೊಂಚು ಹಾಕುತ್ತಿದ್ದ ಮಹೇಂದ್ರ, ಶಿವರಾಜು, ಸೋಪು ಮತ್ತು ಶಿವಕುಮಾರ ಬಂಧಿತ ಆರೋಪಿಗಳು.
ಬಂಧಿತರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು, ಎರಡು ಕಡೆ 9 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಈ ಹಿಂದೆಯೂ ಕೂಡಾ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


