ಹಾಲು ಉತ್ಪಾದಕರಿಂದ ವಿಧಾನಸೌಧ ಚಲೋ
ಹಾಲಿಗೆ ಬೆಂಬಲ ಬೆಲೆ, ಸಬ್ಸಿಡಿ ದರದಲ್ಲಿ ಪಶು ಆಹಾರ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ...

ಬೆಂಗಳೂರು: ಹಾಲಿಗೆ ಬೆಂಬಲ ಬೆಲೆ, ಸಬ್ಸಿಡಿ ದರದಲ್ಲಿ ಪಶು ಆಹಾರ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಮತ್ತು ರಾಜ್ಯ ಹಾಲು ಉತ್ಪಾದಕರು ಹಾಗೂ ನೌಕರರ ಹೋರಾಟ ಸಮಿತಿ (ಕೆಪಿಆರ್‍ಎಸ್)ದ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧ ಚಲೋ ಚಳವಳಿ ನಡೆಸಿದರು.
ರೈಲ್ವೆ ನಿಲ್ದಾಣದ ಆವರಣದಲ್ಲಿ ಸಮಾವೇಶಗೊಂಡ ನೂರಾರು ಪ್ರತಿಭಟನಾಕಾರರು ಬನ್ನಪ್ಪ ಪಾರ್ಕ್‍ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೈನುಗಾರಿಕೆ ಕ್ಷೇತ್ರವನ್ನು ನಿರ್ಲಕ್ಷಿಸಿವೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 23.13 ಲಕ್ಷ ಕುಟುಂಬಗಳು ಹೈನುಗಾರಿಕೆಯಲ್ಲಿ ತೊಡಗಿವೆ. 14 ಜಿಲ್ಲಾ ಹಾಲು ಒಕ್ಕೂಟಗಳು ಹಾಗೂ 12,992 ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳಿಂದ ನಿತ್ಯ 72 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಆದರೆ, ಕೆಎಂಎಫ್ ಹಾಗೂ ಜಿಲ್ಲಾ ಮಟ್ಟದ ಹಾಲು ಒಕ್ಕೂಟಗಳ ಅಸಮರ್ಥತೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಹೈನುಗಾರಿಕೆ ಬಿಕ್ಕಟ್ಟಿಗೆ ಸಿಲುಕಿದ್ದು, ಅವಲಂಬಿತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದರು.
ಪ್ರಸ್ತುತ ಹಾಲಿಗೆ ನೀಡುತ್ತಿರುವ ದರ ವಾಪಸ್ಸು ಪಡೆದು ಬೆಂಬಲ ಬೆಲೆ ನಿಗದಿ ಮಾಡಬೇಕು. ಗುಣಮಟ್ಟದ ಪಶು ಆಹಾರವನ್ನು ಸಬ್ಸಿಡಿ ದರದಲ್ಲಿ ರೈತರಿಗೆ ಪೂರೈಸಬೇಕು. ಪ್ರೋತ್ಸಾಹ ಧನವನ್ನು ಕನಿಷ್ಟ ರು10 ಗೆ ಏರಿಸಬೇಕು. ನಿಗದಿತ ಕೊಬ್ಬಿನಾಂಶ, ಎಸ್‍ಎನ್‍ಎಫ್ ಸೂತ್ರದಡಿ ರು. 4 ಪ್ರೋತ್ಸಾಹದನ ಕಡಿತ ಆದೇಶ ವಾಪಾಸು ಪಡೆಯಬೇಕು. ಹಾಲು ಉತ್ಪಾದಕರ ಸಂಘಗಳ ನೌಕರರನ್ನು ಖಾಯಂಗೊಳಿಸ ಬೇಕು. ಬೆಂಗಳೂರು ಹಾಲು ಒಕ್ಕೂಟದ ವೇತನ ಮಾದರಿ ಯನ್ನು ರಾಜ್ಯಾದ್ಯಂತ ವಿಸ್ತರಿಸಬೇಕು. ಶಾಲಾ ಮಕ್ಕಳು, ಅಂಗನವಾಡಿ ಕೇಂದ್ರಗಳ ಜತೆಗೆ ಕಡುಬಡತನ ಹಿನ್ನೆಲೆಯ ಕುಟುಂಬಗಳಿಗೂ ಸಬ್ಸಿಡಿ ದರದಲ್ಲಿ ಹಾಲು ಸರಬರಾಜು ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


