ಬಿಬಿಎಂಪಿ ತೆರಿಗೆ ವಸೂಲಿ: ಅಧಿಕಾರಿಗಳಿಗೆ ಬಿಸಿ
ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ ನಿರ್ಲಕ್ಷಿಸಿರುವ ಅಧಿಕಾರಿಗಳನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಶಿವರಾಜು ತರಾಟೆಗೆ ತೆಗೆದುಕೊಂಡರು.

ಬೆಂಗಳೂರು: ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ ನಿರ್ಲಕ್ಷಿಸಿರುವ ಅಧಿಕಾರಿಗಳನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಶಿವರಾಜು ತರಾಟೆಗೆ ತೆಗೆದುಕೊಂಡರು.
ಮಂಗಳವಾರ ದಕ್ಷಿಣ ವಲಯ ಕಚೇರಿಗೆ ಭೇಟಿ ನೀಡಿ ತೆರಿಗೆ ವಸೂಲಿ ಬಗ್ಗೆ ಅ„ಕಾರಿಗಳಿಂದ ಮಾಹಿತಿ ಪಡೆದ ಅವರು, ಒಟ್ಟು ರು. 490 ಕೋಟಿ ತೆರಿಗೆಯಲ್ಲಿ ಕೇವಲ ರು. 297.37 ಕೋಟಿ ವಸೂಲಿಯಾಗಿದೆ. ಇನ್ನು 15 ದಿನಗಳ ಒಳಗೆ ಬಾಕಿ ವಸೂಲಿ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ನೋಟಿಸ್ ನೀಡುವುದಾಗಿ ಎಚ್ಚರಿಸಿದರು. ಕೆಲ ವಾರ್ಡ್‍ಗಳಲ್ಲಿ ಕೇವಲ ಶೇ.50ಕ್ಕಿಂತ ಕಡಿಮೆಯಿದೆ ಎಂದು ಉಪ ವಿಭಾಗದ ಸಹ ಕಂದಾಯ ಅಧಿಕಾರಿಗಳು, ಕಂದಾಯ ಪರೀಕ್ಷಕರು ಮತ್ತು ಕಂದಾಯ ವಸೂಲಿಗಾರರನ್ನು ಅಧ್ಯಕ್ಷರುತರಾಟೆಗೆ ತೆಗೆದುಕೊಂಡರು.
ಸುಮಾರು ರು1.8 ಕೋಟಿ ಮೊತ್ತದ 537 ಚೆಕ್ ಬೌನ್ಸ್ ಪ್ರಕರಣಗಳು ಕಂಡುಬಂದಿದ್ದು. ಒಂದು ತಿಂಗಳಲ್ಲಿ ಮಾಲೀಕರಿಂದ ಹಣ ವಸೂಲಿ ಮಾಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಯಾಗಲಿದ್ದಾರೆ. ಅಲ್ಲದೇ ವರ್ಗಾವಣೆಯಾದ ಕೆಲ ಅಧಿಕಾರಿಗಳು ತಮ್ಮ ಅಧೀನದಲ್ಲೇ ಬೌನ್ಸ್ ಚೆಕ್‍ಗಳನ್ನು ಇಟ್ಟುಕೊಂಡಿರುವುದು ತಿಳಿದಿದೆ. ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಅಂತಹ ಅಧಿಕಾರಿಗಳು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರ ವಿರುದ್ಧ ಅಮಾನತಿಗೆ ಶಿಫಾರಸು ಮಾಡುವಂತೆ ಸೂಚಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


