ಜಿಲ್ಲಾ ಸುದ್ದಿ

ಕಸ ವಿಂಗಡಣೆ ಮಾಡದಿದ್ದರೆ ದಂಡ

ಬಿಬಿಎಂಪಿ ಗಾಡಿಗಳಿಗೆ ಕಸ ನೀಡುವಾಗ ವಿಂಗಡಿಸದಿದ್ದರೆ ಅನಿವಾರ್ಯವಾಗಿ ದಂಡ ವಿಧಿಸಬೇಕಾಗುತ್ತದೆ ಎಂದು ಮೇಯರ್ ಮಂಜುನಾಥ ರೆಡ್ಡಿ ...

ಕಸ ವಿಂಗಡಣೆ  ಮಾಡದಿದ್ದರೆ ದಂಡ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಬಿಬಿಎಂಪಿ ಗಾಡಿಗಳಿಗೆ ಕಸ ನೀಡುವಾಗ ವಿಂಗಡಿಸದಿದ್ದರೆ ಅನಿವಾರ್ಯವಾಗಿ ದಂಡ ವಿಧಿಸಬೇಕಾಗುತ್ತದೆ ಎಂದು ಮೇಯರ್ ಮಂಜುನಾಥ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಕಸ ವಿಲೇವಾರಿ ಮತ್ತು ವಿಂಗಡಣೆ ಕುರಿತು  ಜಾಗೃತಿ ಮೂಡಿಸಲು ಸಂಚಾರಿ ಜಾಹೀರಾತು ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು ಬಿಬಿಎಂಪಿ ಕಸ ಗಾಡಿಗಳಿಗೆ ಕಸ ನೀಡುವಾಗ ಹಸಿ ಹಾಗೂ ಒಣ ತ್ಯಾಜ್ಯವಾಗಿ ವಿಂಗಡಣೆ ಮಾಡಿಯೇ ನೀಡಬೇಕು. ಸಾರ್ವಜನಿಕರಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ. ಮೊದಲಿಗೆ 10ಜಾಹೀರಾತು ವಾಹನಗಳು ದಕ್ಷಿಣ ವಲಯದಲ್ಲಿ  ಸಂಚರಿಸಲಿವೆ. ನಂತರ ಎಲ್ಲ ವಲಯಗಳಲ್ಲಿ ಸಂಚರಿಸಿ ಅರಿವು ಮೂಡಿಸಲಾಗುವುದು. ಒಂದು ತಿಂಗಳ ಬಳಿಕವೂ ಕಸ ವಿಂಗಡಿಸದೇ ಇದ್ದರೆ ಭಾರಿಮೊತ್ತದ ದಂಡ ವಿಧಿಸಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.