ಪರಿಷತ್ ಚುನಾವಣೆ ಕೈ ಹಿಡಿಯದ ಜೆಡಿಎಸ್
ರಾಜ್ಯ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತಂತೆ ಎದ್ದಿದ್ದ ಗೊಂದಲಗಳಿಗೆ ಮಾಜಿ ಪ್ರಧಾನಿ ದೇವೇಗೌಡರು ತೆರೆ ಎಳೆದಿದ್ದು, ಎರಡೂ ಪಕ್ಷಗಳು ಸ್ವತಂತ್ರವಾಗಿ ಕಣಕ್ಕಿಳಿಯಲಿವೆ...

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕುರಿತಂತೆ ಎದ್ದಿದ್ದ ಗೊಂದಲಗಳಿಗೆ ಮಾಜಿ ಪ್ರಧಾನಿ ದೇವೇಗೌಡರು ತೆರೆ ಎಳೆದಿದ್ದು, ಎರಡೂ ಪಕ್ಷಗಳು ಸ್ವತಂತ್ರವಾಗಿ ಕಣಕ್ಕಿಳಿಯಲಿವೆ.
ಮೈತ್ರಿಗೆ ಜೆಡಿಎಸ್‍ನಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಶಾಸಕರಾದ ಚಲುವರಾಯಸ್ವಾಮಿ, ಜಮೀರ್ ಮೈತ್ರಿ ಮಾತುಕತೆಗೆ ಮುಂದಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರನ್ನು ಕೆರಳಿಸಿತ್ತು.
ಇವೆಲ್ಲದರ ಬೆನ್ನಲ್ಲೇ, ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎನ್ನುವ ಮೂಲಕ ಮೈತ್ರಿ ಮರಿದು ಬಿದ್ದಿರುವುದನ್ನು ದೇವೇಗೌಡ ಖಚಿತಪಡಿಸಿದ್ದಾರೆ. ಮೈತ್ರಿಗೆ ಜೆಡಿಎಸ್ ಒಪ್ಪದ ಹಿನ್ನೆಲೆ ಯಲ್ಲಿ ಕಾಂಗ್ರೆಸ್ ಕೆಲ ಕಠಿಣ ಕ್ಷೇತ್ರ ಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಅನಿವಾರ್ಯತೆಗೆ ಸಿಲುಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


