ಗುತ್ತಿಗೆ ಬಿಲ್ ಪಾವತಿಸದೆ ವಂಚನೆ
ನ್ಯಾಯಾಲಯದ ಆದೇಶ ಉಲ್ಲಂಘಿಸಿ ಜ್ಯೇಷ್ಠತೆ ಆಧಾರದಲ್ಲಿ ಕಾಮಗಾರಿಗಳ ಬಿಲ್ ಪಾವತಿಸದೆ ಗುತ್ತಿಗೆದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಬಹೃತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಆರೋಪಿಸಿದರು...

ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಜ್ಯೇಷ್ಠತೆ ಆಧಾರದಲ್ಲಿ ಕಾಮಗಾರಿಗಳ ಬಿಲ್ ಪಾವತಿಸದೆ ಗುತ್ತಿಗೆದಾರರಿಗೆ ವಂಚನೆ ಮಾಡಲಾಗುತ್ತಿದೆ ಎಂದು ಬಹೃತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಆರೋಪಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ಆದೇಶ ಕಡೆಗಣಿಸಿ ಪಾಲಿಕೆ ನೂತನ ಟೆಂಡರ್ ಕರೆಯುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿರುವ ಹಳೆ ಕಾಮಗಾರಿಗಳ ಬಾಕಿ ಬಿಲ್‍ಗಳನ್ನು ಪಾವತಿಸಿದ ನಂತರವಷ್ಟೇ ಹೊಸ ಕಾಮಗಾರಿಗಳಿಗೆ ಟೆಂಡರ್ ಕರೆಯಬೇಕು ಎಂದು ಒತ್ತಾಯಿಸಿದರು. ಕಳೆದ 2013ರ ಅಕ್ಟೋಬರ್‍ನಿಂದ 2014ರ ಮಾರ್ಚ್‍ವರೆಗೆ ಕೇವಲ ಶೇ.20 ರಷ್ಟು ಮಾತ್ರ ಹಣ ಬಿಡುಗಡೆ ಮಾಡಲಾಗಿದೆ. ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಕಳೆದ 2 ವರ್ಷಗಳಿಂದ ಸುಮಾರು ಒಂದೂವರೆ ಸಾವಿರ ಕೋಟಿ ರೂ.ಬಾಕಿ ಇದೆ. ಈ ಬಗ್ಗೆ ಸಂಬಂಧಿಸಿದವರಿಗೆ ಮನವಿ ಕೊಟ್ಟರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಾಗಲಿ ಗಮನಹರಿಸುತ್ತಿಲ್ಲ. ಶೀಘ್ರವೇ ಬಿಲ್ ಬಿಡುಗಡೆ ಮಾಡದಿದ್ದಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಟಿ.ವೆಂಕಟೇಶ್ ಮಾತನಾಡಿ, ರಾಜ್ಯ ಸರ್ಕಾರ ಗುತ್ತಿಗೆದಾರರ ನೆರವಿಗೆ ಬಂದು ಬಿಬಿಎಂಪಿಯಿಂದ ಎಲ್‍ಒಸಿ ಹಣ ಬಿಡುಗಡೆಗೊಳಿಸಬೇಕು. ಇಲ್ಲವೇ ಆರ್ಥಿಕ ಸಂಕಷ್ಟದಲ್ಲಿರುವ ಗುತ್ತಿಗೆದಾರರ ಆತ್ಮಹತ್ಯೆಗೆ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗುತ್ತದೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನಗಳಿಗೆ ಪಿ.ಕೋಡ್ ಬಳಸಿ
ಹಣ ಬಿಡುಗಡೆ ಮಾಡಬೇಕು. ಆದರೆ ಪಾಲಿಕೆ ಅನುದಾನದಲ್ಲಿ ನಡೆದ ಕಾಮಗಾರಿಗೆ ಸುಮಾರು ರು.100 ಕೋಟಿಗೂ ಹೆಚ್ಚಿನ ಹಣವನ್ನು ಪಿ.ಕೋಡ್ ಬಳಸಿ ಅಕ್ರಮವಾಗಿ ಪಾವತಿಸಿದ್ದಾರೆ.
ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ. ಹೀಗಾಗಿ ಈ ಅಕ್ರಮ ವಿರುದ್ಧ ಸೂಕ್ತ ತನಿಖೆಯಾಗಬೇಕು ಒತ್ತಾಯಿಸಿದರು. ಸಂಘದ ಸಂಚಾಲಕರಾದ ಎಂ. ಕೃಷ್ಣಮೂರ್ತಿ, ಮಂಜುನಾಥ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


