ಸಿಎಂ ಭರವಸೆ ನಂತರವೂ ನಿಂತಿಲ್ಲ ಕಳಸಾ ಹೋರಾಟ
ಜಡ್ಡುಗಟ್ಟಿದ ಕೇಂದ್ರ, ರಾಜ್ಯ ಸರ್ಕಾರವನ್ನು ಬಡಿದೆಬ್ಬಿಸಲು ಬಂಡಾಯದ ನಾಡಿನ ಕುಡಿಯುವ ನೀರಿನ ಹೋರಾಟ ರಾಜಧಾನಿ...

Published On :
ಬೆಂಗಳೂರು: ಜಡ್ಡುಗಟ್ಟಿದ ಕೇಂದ್ರ, ರಾಜ್ಯ ಸರ್ಕಾರವನ್ನು ಬಡಿದೆಬ್ಬಿಸಲು ಬಂಡಾಯದ ನಾಡಿನ ಕುಡಿಯುವ ನೀರಿನ ಹೋರಾಟ ರಾಜಧಾನಿಯಲ್ಲಿ ಆರನೇ ದಿನಕ್ಕೆ ಕಾಲಿಟ್ಟಿದೆ.
ಸಿಎಂ ಸಿದ್ದರಾಮಯ್ಯ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಎರಡು ರಾಜ್ಯಕ್ಕೆ ಪತ್ರ ಮತ್ತು ಕೇಂದ್ರ ಸರ್ಕಾರದ ಬಳಿ ಮತ್ತೊಮ್ಮೆ ಸರ್ವಪಕ್ಷಗಳ ಜೊತೆಗೆ ರೈತರ ನಿಯೋಗದ ಭರವಸೆ ನೀಡಿದ ನಂತರವೂ ಪ್ರತಿಭಟನೆ ಕಾವು ಮಾತ್ರ ಆರಿಲ್ಲ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರೈತಸೇನಾ ಕರ್ನಾಟಕದ ಕಾರ್ಯಕರ್ತರು ಕಳಸಾಬಂಡೂರಿ ಯೋಜನೆ ಜಾರಿ ಹಾಗೂ ರೈತರ ಸಾಲಮನ್ನಾ ಮಾಡಬೇಕೆಂದು ಕಳೆದ ಆರುದಿನಗಳಿಂದ ಉಪವಾಸ ಸತ್ಯಾಗ್ರಹಕ್ಕೆ ಆರಂಭಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಸ್ವಾತಂತ್ರ ್ಯ ಉದ್ಯಾನವನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳ ಇತ್ಯರ್ಥಕ್ಕೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಮಹದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಲುವಾಗಿ ಗೋವಾ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಸೋಮವಾರವೇ ಪತ್ರ ಬರೆಯುತ್ತೇನೆ.
ಆಯಾ ರಾಜ್ಯದಿಂದ ಸಕಾರಾತ್ಮಕವಾದ ಪ್ರತಿಕ್ರಿಯೆ ಬಂದ ಮೇಲೆ ಮಾತುಕತೆ ನಡೆಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಬಳಿ ಮತ್ತೊಮ್ಮೆ ಸಮಸ್ಯೆ ಬಗೆಹರಿಸುವಂತೆ ಒತ್ತಡ ಹೇರಲು ರಾಜ್ಯದಿಂದ ಮತ್ತೊಮ್ಮೆ ಸರ್ವಪಕ್ಷದ ಜೊತೆಗೆ ರೈತರ ನಿಯೋಗ ಕೊಂಡೊಯ್ಯಲಾಗುವುದು ಎಂದು ಹೇಳಿದರು. ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಶೇ.20ರಷ್ಟು ಮಾತ್ರ ರಾಜ್ಯದ ಪಾಲಿರುತ್ತದೆ.
ಕೇಂದ್ರ ಸರ್ಕಾರ ಶೇ. 80 ಪಾಲು ಹೊಂದಿರುವುದರಿಂದ ಕೇಂದ್ರ ಸರ್ಕಾರವೇ ರೈತರ ನೆರವಿಗೆ ಬರಬೇಕಿದೆ. ಈ ವರ್ಷ ರಾಜ್ಯದಲ್ಲಿ ಬರಗಾಲಕ್ಕೆ ತುತ್ತಾಗಿರುವ ರೈತರು ಸಾಲದ ಸಂಕಷ್ಟದಲ್ಲಿದ್ದಾರೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಲಮನ್ನಾ ವಿಚಾರದ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


