ವಿಕ್ಟೋರಿಯಾ ಆಸ್ಪತ್ರೆ ಸ್ವಚ್ಛಗೊಳಿಸಿದ ಯೋಧರು
ಅಶುಚಿತ್ವದಿಂದ ಗಬ್ಬು ನಾರುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆ ಈಗ ಸಂಪೂರ್ಣ ಸ್ವಚ್ಛ!

ಬೆಂಗಳೂರು: ಅಶುಚಿತ್ವದಿಂದ ಗಬ್ಬು ನಾರುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆ ಈಗ ಸಂಪೂರ್ಣ ಸ್ವಚ್ಛ!
ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಿಬ್ಬಂದಿ ಭಾನುವಾರ ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿ ಮಧ್ಯಾಹ್ನದವರೆಗೂ ಇಡೀ ಆಸ್ಪತ್ರೆ ಮತ್ತು ಆಸ್ಪತ್ರೆ ಆವರಣವನ್ನು ಸ್ವಚ್ಛಗೊಳಿಸಿದರು.
ತಮಿಳುನಾಡು ಹಾಗೂ ಆಂಧ್ರದಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯಕ್ಕೆ ಆಗಮಿಸಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ ಬೆಂಗಳೂರಿಗೆ ಆಗಮಿಸಿ ಆಸ್ಪತ್ರೆಯನ್ನು ಸಂಪೂರ್ಣ ಸ್ವಚ್ಛಗೊಳಿಸಿದರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ತಂಡದ ಸಿಬ್ಬಂದಿ ನಾಯಕ್, ಕೇರಳ ಹಾಗೂ ತಮಿಳುನಾಡಿನಲ್ಲಿ ಮಳೆ ಬಂದ ಹಿನ್ನೆಲೆಯಲ್ಲಿ ಹಾಗು ಅಲ್ಲಿನ ಅನಾಹುತ ನಿವಾರಿಸಲು ಆಗಮಿಸಿದ್ದೆವು. ಜತೆಗೆ ಬೆಂಗಳೂರಿಗೂ ಹೋಗುವಂತೆ ಹಾಗೂ ಅಲ್ಲಿನ ಠಾಣೆ, ಪೊಲೀಸ್ ಸಿಬ್ಬಂದಿ ಭೇಟಿ ಮಾಡುವಂತೆ ಹಿರಿಯ ಅಧಿಕಾರಿಗಳಿಂದ ಸೂಚನೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ವಾರದ ಹಿಂದೆ ಆಗಮಿಸಿ, ಪ್ರಮುಖ ಠಾಣೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದೆವು. ಆದರೆ, ತಾವು ಯಾವ ಊರಿಗೆ ಹೋದರೂ ಕೊನೆ ದಿನ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳುತ್ತೇವೆ. ಅದೇ ರೀತಿ ಬೆಂಗಳೂರಿನಲ್ಲಿ ಭಾನುವಾರ ಕೊನೆಯ ದಿನವಾಗಿದ್ದರಿಂದ ನಗರದ ವಿಕ್ಟೋರಿಯಾ ಆಸ್ಪತ್ರೆಯನ್ನು ಸ್ವಚ್ಛಗೊಳಿಸಿದ್ದೇವೆ ಎಂದರು. ಕ್ಷಿಪ್ರ ಕಾರ್ಯಾಚರಣೆ ಪಡೆಯ ಡೆಪ್ಯುಟಿ ಕಮಾಂಡೆಂಟ್ ಕುರಿಯಾ ಕೋಸ್ ಹಾಗೂ ಅಸಿಸ್ಟೆಂಟ್ ಕಮಾಂಡೇಂಟ್ ಕ್ಲಾರೆನ್ಸ್ ಸ್ವಚ್ಛತಾ ಅಭಿಯಾನದ ನೇತೃತ್ವ ವಹಿಸಿದ್ದರು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


