5 ವರ್ಷದ ಹಿಂದೆ ಮಗಳನ್ನು ಕೊಂದಿದ್ದ ಆರೋಪಿ ತಂದೆ ಸೆರೆ
ಗಂಡನ ಮನೆ ಒಲ್ಲೆ ಎಂದ ಮಗಳನ್ನು ಕೊಲೆ ಮಾಡಿ ಶವವನ್ನು ಗೋಣಿ ಚೀಲದಲ್ಲಿ ತುಂಬಿ ಘಟಪ್ರಭಾ ನದಿಯಲ್ಲಿ ಎಸೆದಿದ್ದ...

Published On :
ಹುಕ್ಕೇರಿ: ಗಂಡನ ಮನೆ ಒಲ್ಲೆ ಎಂದ ಮಗಳನ್ನು ಕೊಲೆ ಮಾಡಿ ಶವವನ್ನು ಗೋಣಿ ಚೀಲದಲ್ಲಿ ತುಂಬಿ ಘಟಪ್ರಭಾ ನದಿಯಲ್ಲಿ ಎಸೆದಿದ್ದ ಪ್ರಕರಣವನ್ನು ಐದು ವರ್ಷಗಳ ನಂತರ ಹುಕ್ಕೇರಿ ಪೊಲೀಸರು ಭೇದಿಸಿದ್ದಾರೆ.
ತಂದೆ ಸಿದ್ರಾಮ ಬಸವಣ್ಣಿ ಮುಂಗಾರಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಸುಲ್ತಾನಪೂರ ಗ್ರಾಮದ ಲಕ್ಷ್ಮೀ ಅಶೋಕ ಶಿಗಿಹಳ್ಳಿ (20) ಎಂಬಾತಳನ್ನು ಗೋಕಾಕ ತಾಲೂಕಿನ ಮರಡಿ ಶಿವಾಪೂರ ಗ್ರಾಮದ ಅಶೋಕ ಶಿಗಿಹಳ್ಳಿ ಎಂಬವನಿಗೆ ಮದುವೆ ಮಾಡಿಕೊಡಲಾಗಿತ್ತು.
ಆದರೆ ಪತಿ ಜತೆ ಸಂಸಾರ ಮಾಡಲ್ಲ. ಎಷ್ಟೇ ಬುದ್ಧಿವಾದ ಹೇಳಿದರೂ ಕಿವಿಗೊಡದ ಹಿನ್ನೆಲೆಯಲ್ಲಿ ಲಕ್ಷ್ಮಿಯನ್ನು ಬಡಿಗೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


