ಜಿಲ್ಲಾ ಸುದ್ದಿ

ಡಿ.ಕೆ ರವಿಯದ್ದು ಕೊಲೆಯಲ್ಲ ಆತ್ಮಹತ್ಯೆ ಎಂದ ಸಿಬಿಐ

ಐಎಎಸ್ ಅಧಿಕಾರಿ ಡಿಕೆ ರವಿ ಅವರದ್ದು 'ಆತ್ಮಹತ್ಯೆ' ಎಂದು ಕೇಂದ್ರ ತನಿಖಾ ದಳ (ಸಿಬಿಐ) ಹೇಳಿದ್ದು, ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ತನಿಖೆ...

ಡಿ.ಕೆ ರವಿಯದ್ದು ಕೊಲೆಯಲ್ಲ ಆತ್ಮಹತ್ಯೆ ಎಂದ ಸಿಬಿಐ
ಡಿ.ಕೆ ರವಿ
Published On :

ಬೆಂಗಳೂರು: ಐಎಎಸ್ ಅಧಿಕಾರಿ ಡಿಕೆ ರವಿ ಅವರದ್ದು 'ಆತ್ಮಹತ್ಯೆ' ಎಂದು ಕೇಂದ್ರ ತನಿಖಾ ದಳ (ಸಿಬಿಐ) ಹೇಳಿದ್ದು, ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ತನಿಖೆಯ ಅಗತ್ಯವಿಲ್ಲವೆಂದು ಷರಾ ಬರೆದು ಪ್ರಕರಣವನ್ನು ಕ್ಲೋಸ್ ಮಾಡಿದೆ.

ತನಿಖೆಯ ಅಂತಿಮ ವರದಿಯನ್ನು ಸಿಬಿಐ ಸಿದ್ಧಪಡಿಸಿದ್ದು, ಕೇಂದ್ರ ಕಚೇರಿಯಿಂದ ಅನುಮತಿ ಪಡೆದ ಕೂಡಲೇ ಇನ್ನೆರಡು ದಿನಗಳಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ  ಸಿಬಿಐ ವರದಿ ಸಲ್ಲಿಸಲಿದೆ. ಸಾರ್ವಜನಿಕರ ಒತ್ತಾಯದ ಮೇರೆಗೆ ರಾಜ್ಯ ಸರಕಾರ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ಒಪ್ಪಿಸಿತ್ತು. ಮಾರ್ಚ್ 16ನೇ ತಾರೀಖಿನಂದು ರವಿ ಅವರ ಶವ ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿತ್ತು.

ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದ ಡಿಕೆ ರವಿ ಅವರ ಸಾವಿನ ನಿಗೂಢತೆಯನ್ನು ಭೇದಿಸುವುದು ರಾಜ್ಯ ಪೊಲೀಸರಿಗೆ ಭಾರೀ ಸವಾಲಿನದಾಗಿತ್ತು. ಕೋಲಾರದಲ್ಲಿ ಭೂ ಮಾಫಿಯಾ ವಿರುದ್ಧ ಯುದ್ಧ ಸಾರಿದ್ದ ಡಿಕೆ ರವಿಯನ್ನು ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆಗೆ ಹೆಚ್ಚುವರಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿತ್ತು. ಅಲ್ಲಿ ಕೂಡ ಅವರು ತೆರಿಗೆಗಳ್ಳರ ವಿರುದ್ಧ ತಿರುಗಿಬಿದ್ದಿದ್ದರು. ಕೋಲಾರದಲ್ಲಿದ್ದಾಗ ಮತ್ತು ಬೆಂಗಳೂರಿನಲ್ಲಿದ್ದಾಗ ಅವರಿಗೆ ಹಲವಾರು ಬೆದರಿಕೆ ಕರೆಗಳು ಕೂಡ ಬಂದಿದ್ದವು.

ಡಿ.ಕೆ ರವಿ ಸಾವಿನ ನಂತರ ರಾಜ್ಯಾದ್ಯಂತ ಭಾರೀ ಪ್ರತಿಭಟನೆಗಳಾಗಿದ್ದವು.ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳ ಹೇಳಿಕೆಗಳು ಭಾರೀ ಗೊಂದಲ ಸೃಷ್ಟಿಸಿದ್ದವು. ರವಿ ಅವರ ಸಾವಿನ ಹಿಂದೆ ಕಾಣದ ಕೈಗಳ ಕೈವಾಡವಿದೆ, ಅನೇಕ ರಾಜಕಾರಣಿಗಳ ಸಂಚಿದೆ ಎಂದು ಕೂಗು ಎದ್ದಿದ್ದ ಕಾರಣ ಮಾರ್ಚ್ 25ರಂದು ಸಿದ್ದರಾಮಯ್ಯ ಅವರು ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದರು. ತನಿಖೆಗೆ ಯಾವುದೇ ಶಿಫಾರಸಿಲ್ಲ ತನಿಖೆ ಮತ್ತು ವೈಜ್ಞಾನಿಕ ವರದಿಗಳ ಆಧಾರದ ಮೇಲೆ ಈ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯ ಕೈವಾಡವಿಲ್ಲ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದ್ದು, ಯಾವುದೇ ವ್ಯಕ್ತಿಯ ವಿರುದ್ಧ ತನಿಖೆಗೆ ಶಿಫಾರಸು ಮಾಡುವುದಿಲ್ಲ ಎಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.