ನಿಂತಿದ್ದ ಬಸ್ ಗೆ ಲಾರಿ ಡಿಕ್ಕಿ: ಯುವತಿ ಸಾವು
ನಿಂತಿದ್ದ ಖಾಸಗಿ ಬಸ್ ಗೆ ಮೀನು ಸಾಗಿಸುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ನ ಲ್ಲಿದ್ದ ಓರ್ವ ಯುವತಿ ಮೃತಪಟ್ಟು...

Published On :
ಉಡುಪಿ: ನಿಂತಿದ್ದ ಖಾಸಗಿ ಬಸ್ ಗೆ ಮೀನು ಸಾಗಿಸುವ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ನ ಲ್ಲಿದ್ದ ಓರ್ವ ಯುವತಿ ಮೃತಪಟ್ಟು, 10 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಬ್ರಹ್ಮಾವರದ ಮಾಬುಕಳದಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿಯನ್ನು ಎಸ್ಎಮ್ಎಸ್ ಕಾಲೇಜಿನ ಉದ್ಯೋಗಿ ಮೆರಿಟಾ ಡಿಸಿಲ್ವಾ (23) ಎಂದು ಗುರುತಿಸಲಾಗಿದೆ.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರಬೇಕಾದರೆ ವೇಗವಾಗಿ ಬಂದ ಮೀನು ಸಾಗಿಸುತ್ತಿದ್ದ ಲಾರಿ ಬಸ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಓರ್ವ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗಮಸಿದ ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


