ಎಸ್‍ಐಟಿಯಿಂದ 5 ಹೆಚ್ಚುವರಿ ಎಫ್ಐಆರ್
ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ದಳ (ಎಸ್‍ಐಟಿ) ಅಧಿಕಾರಿಗಳು ಹೆಚ್ಚುವರಿಯಾಗಿ...

ಬಳ್ಳಾರಿ: ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯಂತೆ ತನಿಖೆ ಆರಂಭಿಸಿರುವ ವಿಶೇಷ ತನಿಖಾ ದಳ (ಎಸ್‍ಐಟಿ) ಅಧಿಕಾರಿಗಳು ಹೆಚ್ಚುವರಿಯಾಗಿ ಐದು ಹೊಸ ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಈತನ ಆಪ್ತರ ಮೇಲೆ ಮತ್ತಷ್ಟು ಎಫ್ಐಆರ್ ದಾಖಲಾಗಿವೆ ಎಂದು ಎಸ್‍ಐಟಿ ಅಧಿಕಾರಿ ಮೂಲಗಳು ಸ್ಪಷ್ಟಪಡಿಸಿವೆ. ಅಕ್ರಮ ಗಣಿಗಾರಿಕೆ ತನಿಖಾ ಹಂತದ ಆತಂಕದಲ್ಲಿರುವ ರೆಡ್ಡಿಗೆ ಹೊಸದಾಗಿ ದಾಖಲಾಗಿರುವ ಎಫ್ಐಆರ್‍ಗಳು ಹೆಚ್ಚಿನ ವಿಚಾರಣೆಯನ್ನು ಎದುರಿಸಲೇಬೇಕಾದ ಅನಿವಾರ್ಯತೆಯ ಇಕ್ಕಟ್ಟಿಗೆ ಸಿಲುಕಿಸಿವೆ. ಲೋಕಾಯುಕ್ತರ ವರದಿಯನ್ವಯ ಈಗಾಗಲೇ 55 ಎಫ್ಐಆರ್ ಗಳನ್ನು ದಾಖಲು ಮಾಡಲಾಗಿದ್ದು, ಒಟ್ಟು 60 ಪ್ರಕರಣಗಳು ಎಸ್‍ಐಟಿ ದಾಖಲಿಸಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


