ಜಿಲ್ಲಾ ಸುದ್ದಿ

ವಾಹನ ಸವಾರರಿಗೆ ಶಾಕ್: 14,280 ಡಿಎಲ್ ಅಮಾನತಿಗೆ ಶಿಫಾರಸು

ಸಂಚಾರ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರು, ಪದೇಪದೆ ಸಂಚಾರ ನಿಯಮ ಉಲ್ಲಂಘಿಸಿದ 14,280 ವಾಹನ...

ವಾಹನ ಸವಾರರಿಗೆ ಶಾಕ್: 14,280 ಡಿಎಲ್ ಅಮಾನತಿಗೆ ಶಿಫಾರಸು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರು, ಪದೇಪದೆ ಸಂಚಾರ ನಿಯಮ ಉಲ್ಲಂಘಿಸಿದ 14,280 ವಾಹನ ಸಾವರರ ಚಾಲನ ಪರವಾನಗಿ(ಡಿಎಲ್) ಅಮಾನತುಗೊಳಿಸುವಂತೆ ಶಿಫಾರಸು ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 8 ತಿಂಗಳಿಂದ ಪದೇಪದೆ ನಿಯಮ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ 14, 280 ವಾಹನ ಸವಾರರ ಡಿಎಲ್ ಅನ್ನು ಪೊಲೀಸರು ಜಪ್ತಿ ಮಾಡಿದ್ದು, ಇದೀಗ ಅವುಗಳನ್ನು ಅಮಾನತುಗೊಳಿಸುವಂತೆ ಆರ್‌ಟಿಒಗೆ ಸಂಚಾರಿ ಪೊಲೀಸರು ಶಿಫಾರಸು ಮಾಡಿದ್ದಾರೆ.

ಈ ಮೂಲಕ ಪದೇಪದೆ ಸಿಗ್ನಲ್ ಜಂಪ್ ಮಾಡುವವರಿಗೆ, ಮದ್ಯಪಾನ ಮಾಡಿ ಚಾಲನೆ ಮಾಡುವವರಿಗೆ, ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸುವವರಿಗೆ ಹಾಗೂ ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವವರಿಗೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.