ರಾಯಚೂರಲ್ಲಿ ಐಐಟಿ ಇಂದು ಪ್ರತಿಭಟನೆ
ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಯನ್ನು ರಾಯಚೂರಿನಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿ ಅ.15ರಂದು ಐಐಟಿ ಮಂಜೂರಾತಿ ಹೋರಾಟ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ...

ಬೆಂಗಳೂರು: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಯನ್ನು ರಾಯಚೂರಿನಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿ ಅ.15ರಂದು ಐಐಟಿ ಮಂಜೂರಾತಿ ಹೋರಾಟ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವರಾಜ ಕಳಸ, ಬೆಳಗ್ಗೆ 10.30 ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸರ್ವಪಕ್ಷಗಳ ಮತ್ತು ಹೋರಾಟ ಸಮಿತಿಯನ್ನೊಳಗೊಂಡ ನಿಯೋಗ ಕೇಂದ್ರ ಮಾನವ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಯಚೂರಿನಲ್ಲಿ ಐಐಟಿ ಸ್ಥಾಪಿಸಬೇಕೆಂದು ಒತ್ತಾಯಿಸಲಾಗುವುದು. ರಾಜ್ಯ ಸರ್ಕಾರ ಮೂರು ಜಿಲ್ಲೆಗಳ ಹೆಸರು ಸೂಚಿಸಿ ಕೇಂದ್ರ ಸರ್ಕಾರವನ್ನು ಗೊಂದಲಕ್ಕೀಡು ಮಾಡಿದೆ. ರಾಜಕೀಯ ಕುತಂತ್ರದಿಂದಾಗಿ ಐಐಠಿ ರಾಯಚೂರಿನ ಸಿಗಲಿಲ್ಲ ಎಂದು ಆರೋಪಿಸಿದರು.
ಡಾ.ಡಿ.ಎಂ. ನಂಜುಡಪ್ಪ ವರದಿ ಶಿಫಾರಸಿನಂತೆ ಸಚಿವ ಸಂಪುಟ ಐಐಟಿ ರಾಯಚೂರಿನಲ್ಲಿ ಸ್ಥಾಪಿಸುವಲ್ಲಿ ಬೇಜವಾ ಬ್ದಾರಿತನದಿಂದ ನಡೆದುಕೊಳ್ಳುತ್ತಿದೆ. ಐಐಟಿ ಮಂಜೂರಾತಿ ಹೋರಾಟ ಸಮಿತಿ ಹೋರಾಟದ ಫಲವಾಗಿ ಮು ಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಬದಲಾಗಿ ರಾಯಚೂರಿನಲ್ಲಿ ಐಐಟಿ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆದರೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಕೇಂದ್ರ ಸರ್ಕಾರ ಐಐಟಿ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


