ಜಿಲ್ಲಾ ಸುದ್ದಿ

ಮೊದಲ ಪತ್ನಿ ತೊರೆ ಎಂದವಳೇ ಹತ

ಮೊದಲ ಪತ್ನಿ ತೊರೆದು ತನ್ನೊಂದಿಗೆ ಸಂಸಾರ ನಡೆಸುವಂತೆ ಪೀಡಿಸುತ್ತಿದ್ದ ಎರಡನೇ ಪತ್ನಿಯನ್ನು ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿ ಯಲ್ಲಿಯಲ್ಲಿ ಸೋಮವಾರ ನಡೆದಿದೆ...

ಮೊದಲ ಪತ್ನಿ ತೊರೆ ಎಂದವಳೇ ಹತ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಮೊದಲ ಪತ್ನಿ ತೊರೆದು ತನ್ನೊಂದಿಗೆ ಸಂಸಾರ ನಡೆಸುವಂತೆ ಪೀಡಿಸುತ್ತಿದ್ದ ಎರಡನೇ ಪತ್ನಿಯನ್ನು ವ್ಯಕ್ತಿಯೊಬ್ಬ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿ ಯಲ್ಲಿಯಲ್ಲಿ ಸೋಮವಾರ ನಡೆದಿದೆ.

ದೊಡ್ಡಕಮ್ಮನಹಳ್ಳಿ ನಿವಾಸಿ ಶಾಹಿದಾ (38) ಕೊಲೆಯಾದ ಮಹಿಳೆ. ಆರೋಪಿ ಪತಿ ಸಿದ್ದಿಕಿ ಪಾಷನನ್ನು ಸ್ಥಳೀಯರ ನೆರನಿವಿಂದ ಪೊಲೀಸರು ಬಂಧಿಸಿದ್ದಾರೆ. ಮೊದಲು ಬೇರೊಬ್ಬ ಮಹಿಳೆಯನ್ನು ವಿವಾಹವಾಗಿದ್ದ ಸಿದ್ದಿಕಿ ಪಾಷಾ ಬಳಿಕ ಶಾಹಿದಾ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಹೀಗಾಗಿ ಕಳೆದ 6 ತಿಂಗಳಿಂದ ಶಾಹಿದಾ ಮನೆಗೆ ಹೋಗದೆ ಮೊದಲ ಪತ್ನಿ ಜತೆ ಪಾಷ ವಾಸವಿದ್ದ. ಮನೆಗೆ ಬಾರದ ಕಾರಣ ಕೋಪಗೊಂಡ ಶಾಹಿದಾ ಮೊದಲ ಪತ್ನಿಯನ್ನು ಬಿಟ್ಟು ತನ್ನೊಟ್ಟಿಗೆ ಸಂಸಾರ ನಡೆಸದಿದ್ದರೆ ಪೊಲೀಸರಿಗೆ ದೂರು ಕೊಡುವುದಾಗಿ ಪಾಷಾನನ್ನು ಹೆದರಿಸಿದ್ದಳು.

ಇದರಿಂದ ಪಾಷಾ ಕುಪಿತಗೊಂಡಿದ್ದ. ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಸೋಮವಾರ ನಸುಕಿನಲ್ಲಿ ನಿದ್ರೆಯಲ್ಲಿದ್ದ ಶಾಹಿದಾ ತಲೆಗೆ ಸುತ್ತಿಗೆಯಿಂದ ಹೊಡೆದು ಸಿಮೆಂಟ್
ಇಟ್ಟಿಗೆಯನ್ನು ತಲೆ ಮೇಲೆ ಹಾಕಿ ಕೊಲೆ ಮಾಡಿದ್ದಾನೆ. ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.