ಕಲಬುರ್ಗಿಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆ ಶೀಘ್ರ ಆರಂಭ
ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹೃದ್ರೋಗಿಗಳು ಜಯದೇವ...

ಬೆಂಗಳೂರು: ಯಾದಗಿರಿ, ಕೊಪ್ಪಳ, ಬೀದರ್ ಹಾಗೂ ಕಲಬುರ್ಗಿ ಸೇರಿದಂತೆ ಹೈದರಾಬಾದ್ ಕರ್ನಾಟಕದ ಹೃದ್ರೋಗಿಗಳು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇನ್ನುಮುಂದೆ ಬೆಂಗಳೂರಿಗೆ ಬರಬೇಕಾಗಿಲ್ಲ. ಕೆಲವೇ ತಿಂಗಳಲ್ಲಿ ಜಯದೇವ ಆಸ್ಪತ್ರೆ ಕಲಬುರ್ಗಿಯಲ್ಲಿ 114 ಹಾಸಿಗೆಗಳ ನೂತನ ಶಾಖೆ ಆರಂಭಿಸುತ್ತಿದೆ.
40 ಐಸಿಯು ಬೆಡ್ ಸೇರಿದಂತೆ ಒಟ್ಟು 114 ಬೆಡ್‌ಗಳ ಶಾಖೆಯನ್ನು ಕಲಬುರ್ಗಿಯಲ್ಲಿ ಆರಂಭಿಸಲಾಗುತ್ತಿದೆ. ಇದಕ್ಕಾಗಿ ನಾವು ಈಗಾಗಲೇ ಕೆಲವು ಹೃದಯ ರೋಗ ತಜ್ಞರನ್ನು ಗುರುತಿಸಿದ್ದೇವೆ ಮತ್ತು ನಾಲ್ವರು ಕರ್ತವ್ಯ ನಿರತ ವೈದ್ಯರನ್ನು, ಇಬ್ಬರು ಸರ್ಜನ್‌ಗಳನ್ನು ಹಾಗೂ ಇಬ್ಬರು ಅರಿವಳಿಕೆ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿರುವ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆ ಆವರಣದಲ್ಲಿ 15 ಕೋಟಿ ರುಪಾಯಿ ವೆಚ್ಚದಲ್ಲಿ ಜಯದೇವ ಶಾಖೆ ಆರಂಭಿಸಲಾಗುತ್ತಿದ್ದು, ಇದಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ 6 ಕೋಟಿ ರುಪಾಯಿ ಅನುದಾನ ನೀಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


