ಬಿಎಂಟಿಸಿ ಬಸ್ ಡಿಕ್ಕಿ; ಮತ್ತೊಬ್ಬ ವಿದ್ಯಾರ್ಥಿ ಸಾವು
ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮಖಾಮುಖಿ ಡಿಕ್ಕಿ ಸಂಭವಿಸಿ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಉತ್ತರಹಳ್ಳಿ ವಿಷ್ಣುವರ್ಧನ್ ರಸ್ತೆಯಲ್ಲಿ ನಡೆದಿದೆ...

ಬೆಂಗಳೂರು: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮಖಾಮುಖಿ ಡಿಕ್ಕಿ ಸಂಭವಿಸಿ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಉತ್ತರಹಳ್ಳಿ ವಿಷ್ಣುವರ್ಧನ್ ರಸ್ತೆಯಲ್ಲಿ ನಡೆದಿದೆ.
ಕುಮಾರನ್ಸ್ ಕಾಲೇಜಿನಲ್ಲಿ ದ್ವಿತಿಯ ಪಿಯು ವ್ಯಾಸಂಗ ಮಾಡುತ್ತಿದ್ದ ಉತ್ತರ ಹಳ್ಳಿ ಬಿಇಸಿಎಸ್ ಲೇಔಟ್ ನಿವಾಸಿ ಸಂವೇದ್ ದತ್ತಾ(17) ಮೃತ ವಿದ್ಯಾರ್ಥಿ. ಸಂಜೆ 4.30ರಲ್ಲಿ ತನ್ನ ಬೈಕ್‍ನಲ್ಲಿ ಉತ್ತರಹಳ್ಳಿ ಕಡೆಯಿಂದ ಎನ್.ಆರ್.ಕಾಲೋನಿಗೆ ತೆರಳುತ್ತಿದ್ದ.
ವಿಷ್ಣುವರ್ಧನ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಎಂದುರಿನಿಂದ ಬಂದ ಬಿಎಂಟಿಸಿ ಬಸ್‍ಗೆ ಬೈಕ್ ಡಿಕ್ಕಿಯಾಗಿದೆ. ಈ ವೇಳೆ ತೀವ್ರ ರಕ್ತಸ್ರಾವವಾಗಿ ಸಂವೇದ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಂವೇದ್ ತಂದೆ ನರಸಿಂಹ ಅವರು ಆರ್.ವಿ ಎಂಜಿನಿಯರಿಂಗ್ ಕಾಲೇಜಿ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ. ಕುಮಾರ ಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


